Thursday, October 15, 2026
spot_imgspot_img
spot_imgspot_img

ಬೆಳ್ತಂಗಡಿ: ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಮೂವರು ಆರೋಪಿಗಳ ದಸ್ತಗಿರಿ

- Advertisement -
- Advertisement -

ಬೆಳ್ತಂಗಡಿ: ಬೆಳ್ತಂಗಡಿ ನಡ ಗ್ರಾಮ ನಿವಾಸಿ ಡಾ. ಪ್ರದೀಪ್ ಎ (51) ಅವರು ಬೆಳ್ತಂಗಡಿ ನಾವೂರು ಎಂಬಲ್ಲಿ ನಡೆಸುತ್ತಿದ್ದ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ದಿನಾಂಕ 06-10-2026ರ ರಾತ್ರಿ ಕಿಡಿಗೇಡಿಗಳು ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪರಿಣಾಮ ಔಷಧಿ ಹಾಗೂ ವೈದ್ಯಕೀಯ ಸಲಕರಣೆಗಳು ಸೇರಿದಂತೆ ಅಂದಾಜು 2 ರಿಂದ 3 ಲಕ್ಷ ರೂ. ಮೌಲ್ಯದ ಸೊತ್ತುಗಳು ಸುಟ್ಟುಹೋಗಿದ್ದವು.

ಈ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ 112/2026, ಕಲಂ 326(f), 326(G), 324(5) BNS 2023ರಂತೆ ಪ್ರಕರಣ ದಾಖಲಾಗಿತ್ತು.ಪ್ರಕರಣದ ತನಿಖೆ ನಡೆಸಿದ ಬೆಳ್ತಂಗಡಿ ಠಾಣಾ ಪೊಲೀಸರು ಆರೋಪಿಗಳಾದ ಬೆಳ್ತಂಗಡಿ ನಾವೂರು ನಿವಾಸಿಗಳಾದ ರವಿ ಕುಮಾರ್ (31), ಸುರೇಶ್ ಪಿ.ಎನ್ (44) ಮತ್ತು ದಿನೇಶ್ ಪ್ರಭು (51) ಎಂಬುವವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು, ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

Related news

error: Content is protected !!