Tuesday, July 21, 2026
spot_imgspot_img
spot_imgspot_img

ಬೆಳ್ತಂಗಡಿ: ನಡ ಕನ್ಯಾಡಿ ಪರಿಸರದಲ್ಲಿ ಬೋನಿಗೆ ಬಿದ್ದ ಚಿರತೆ- ಅರಣ್ಯ ಇಲಾಖೆಯ ಕಾರ್ಯಾಚರಣೆ

- Advertisement -
- Advertisement -

ಬೆಳ್ತಂಗಡಿ: ತಾಲೂಕಿನ ನಡ ಕನ್ಯಾಡಿ ಪರಿಸರ ಪ್ರದೇಶದಲ್ಲಿ ಅರಣ್ಯ ಇಲಾಖೆ ಸ್ಥಾಪಿಸಿದ್ದ ಬೋನಿಗೆ ಚಿರತೆಯೊಂದು ಬಿದ್ದಿದ್ದು, ಚಿರತೆಯನ್ನು ಸೆರೆಹಿಡಿಯುವಲ್ಲಿ ಇಲಾಖೆ ಕೈಗೊಂಡ ಪತ್ತೆ ಕಾರ್ಯಾಚರಣೆ ಕೊನೆಗೂ ಯಶಸ್ವಿಯಾಗಿದೆ.

ಚಿರತೆಯನ್ನು ಹಿಡಿಯಲು ಅರಣ್ಯ ಇಲಾಖೆ ವಿಶೇಷ ತಂಡವನ್ನು ರಚಿಸಿ, ಚಿರತೆ ಸಂಚರಿಸುತ್ತಿದ್ದ ಸ್ಥಳಗಳನ್ನು ಗುರುತಿಸಿ, ತಾಲೂಕಿನ ವಿವಿಧ ಪ್ರದೇಶಗಳಲ್ಲಿ ವಿಶೇಷ ಬೋನುಗಳನ್ನು ಸ್ಥಾಪಿಸಿತ್ತು. ಇದರ ಫಲವಾಗಿ ಇದೀಗ ಒಂದು ಚಿರತೆ ಬೋನಿಗೆ ಸಿಲುಕಿದೆ.

ಈ ಪ್ರದೇಶದಲ್ಲಿ ಚಿರತೆಯ ಓಡಾಟ ತೀವ್ರವಾಗಿದ್ದು, ಈ ಹಿಂದೆ ವ್ಯಕ್ತಿಯೊಬ್ಬರ ಮೇಲೆ ದಾಳಿ ನಡೆಸಿದ್ದಲ್ಲದೆ, ಹಲವು ಸಾಕು ಪ್ರಾಣಿಗಳ ಮೇಲೂ ದಾಳಿ ನಡೆಸಿದ್ದ ಘಟನೆಗಳು ವರದಿಯಾಗಿದ್ದವು. ಇದರಿಂದ ಸ್ಥಳೀಯರಲ್ಲಿ ಭೀತಿ ವಾತಾವರಣ ನಿರ್ಮಾಣವಾಗಿತ್ತು.

ಕೊನೆಗೂ ಬೋನು ಸ್ಥಾಪಿಸಿ ಚಿರತೆಯನ್ನು ಸುರಕ್ಷಿತವಾಗಿ ಸೆರೆಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

Related news

error: Content is protected !!