Tuesday, April 20, 2021
spot_imgspot_img
spot_imgspot_img

ಬೆಂಗಳೂರು ಸರಣಿ ಬಾಂಬ್ ಸ್ಫೋಟದ ಪ್ರಮುಖ ಆರೋಪಿ ಬಂಧನ.!

ಬೆಂಗಳೂರು: ಬೆಂಗಳೂರು ನಗರವನ್ನು ತಲ್ಲಣಗೊಳಿಸಿದ್ದ ಸರಣಿ ಬಾಂಬ್ ಸ್ಫೋಟದ ಪ್ರಮುಖ ಆರೋಪಿಯನ್ನು ಭಯೋತ್ಪಾದನಾ ನಿಗ್ರಹ ದಳ ಪೊಲೀಸರು ಬಂಧಿಸಿದ್ದಾರೆ.

ಶೋಯೆಬ್ ಬಂಧಿತ ಆರೋಪಿಯಾಗಿದ್ದು, ಎಟಿಎಸ್ ಪೊಲೀಸರು ಕೇರಳದಲ್ಲಿ ಬಂಧಿಸಿದ್ದಾರೆ. 2008ರಿಂದ ಆರೋಪಿ ತಲೆಮರೆಸಿಕೊಂಡಿದ್ದ. ಆದರೆ ಪೊಲೀಸರು ಮಾತ್ರ ಬಾಂಬ್ ಸ್ಫೋಟ ಪ್ರಕರಣದ ಆರೋಪಿಗಳ ಹುಡುಕಾಟದಲ್ಲೇ ತೊಡಗಿದ್ದರು. ಹೀಗೆ ತನಿಖೆ ನಡೆಸುವಾಗ ಕೇರಳದಲ್ಲಿರುವುದು ಪತ್ತೆಯಾಗಿದ್ದು, ಹೊಂಚು ಹಾಕಿ ಆರೋಪಿಯನ್ನು ಬಂಧಿಸಿದ್ದಾರೆ.


 
ಭಯೋತ್ಪಾದನಾ ನಿಗ್ರಹ ದಳ ಪೊಲೀಸರು ಎಷ್ಟೇ ಹುಡುಕಿದರೂ ಪ್ರಮುಖ ಆರೋಪಿ ಶೋಯೆಬ್ ಸಿಕ್ಕಿರಲಿಲ್ಲ. ಈ ಹಿಂದೆ ಆರೋಪಿ ಸಲೀಂನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಈತ ಸಹ ಕೇರಳದಲ್ಲಿಯೇ ತಲೆಮರೆಸಿಕೊಂಡಿದ್ದ. 2018ರಲ್ಲಿ ಸಲೀಂನನ್ನು ಬಂಧಿಸಲಾಗಿತ್ತು. ಬಳಿಕ ಪ್ರಮುಖ ಆರೋಪಿಗಾಗಿ ಬಲೆ ಬೀಸಲಾಗಿತ್ತು.

2008ರ ಜುಲೈ 25ರಂದು ಮಡಿವಾಳ ಸೇರಿದಂತೆ ಒಟ್ಟು ಒಂಬತ್ತು ಕಡೆ ಬಾಂಬ್ ಸ್ಫೋಟಗಳು ನಡೆದಿದ್ದವು. ಘಟನೆಯಲ್ಲಿ ಒಬ್ಬರು ಸಾವನ್ನಪ್ಪಿದ್ದರು. 20 ಮಂದಿ ಗಂಭೀರವಾಗಿ ಗಾಯಗೊಂಡಿದ್ದರು. ಅದೇ ವರ್ಷ ಜೈಪುರ ಮತ್ತು ಅಹಮದಾಬಾದ್‍ಗಳಲ್ಲಿಯೂ ಸರಣಿ ಸ್ಫೋಟ ಸಂಭವಿಸಿದ್ದವು. ಈ ಸ್ಫೋಟದ ಪ್ರಮುಖ ಸಂಚುಕೋರ ಈತನೇ ಎಂದು ಶಂಕಿಸಲಾಗಿದೆ.

- Advertisement -

MOST POPULAR

HOT NEWS

Related news

error: Content is protected !!