Thursday, March 28, 2024
spot_imgspot_img
spot_imgspot_img

ಬಜೆಟ್ ಮಂಡನೆಯಲ್ಲಿ ಸಿಎಂ ಯಡಿಯೂರಪ್ಪ ಹೊಸ ದಾಖಲೆ; ಮಹಿಳೆಯರ ದಿನದಂದು ಭರ್ಜರಿ ಗಿಫ್ಟ್ ಕೊಟ್ಟ ಸಿಎಂ

- Advertisement -G L Acharya panikkar
- Advertisement -

ಬೆಂಗಳೂರು: ಇಂದು 8ನೇ ಬಜೆಟ್ ಮಂಡಿಸುವ ಮೂಲಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜ್ಯದಲ್ಲಿ 2ನೇ ಅತಿ ಹೆಚ್ಚು ಬಜೆಟ್ ಮಂಡಿಸಿದ ಕೀರ್ತಿಗೆ ಪಾತ್ರರಾದರು. ಈ ಹಿಂದೆ ಮಾಜಿ ಮುಖ್ಯಮಂತ್ರಿಗಳಾದ ದಿವಂಗತ ರಾಮಕೃಷ್ಣ ಹೆಗಡೆ ಹಾಗೂ ಹಾಲಿ ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ತಲಾ 13 ಬಜೆಟ್ ಮಂಡಿಸಿ ದಾಖಲೆ ಬರೆದಿದ್ದಾರೆ.

ಸದ್ಯಕ್ಕೆ ಅತಿಹೆಚ್ಚು ಬಜೆಟ್ ಮಂಡಿಸಿದ ಕೀರ್ತಿಯೂ ಇವರಿಬ್ಬರಿಗೂ ಸಲ್ಲುತ್ತದೆ. ನಂತರದ ಸರದಿ ಹಾಲಿ ಸಿಎಂ ಯಡಿಯೂರಪ್ಪನವರದು.2006ರಲ್ಲಿ ಬಿಜೆಪಿ ಜೆಡಿಎಸ್ ಸಮ್ಮಿಶ್ರ ಸರ್ಕಾರವಿದ್ದಲ್ಲಿ ಉಪಮುಖ್ಯಮಂತ್ರಿಯಾಗುವುದರ ಜೊತೆಗೆ ಹಣಕಾಸು ಖಾತೆಯನ್ನು ಹೊಂದಿದ್ದ ಯಡಿಯೂರಪ್ಪನವರು ಮೊದಲ ಬಾರಿಗೆ ಆಯವ್ಯಯ ಮಂಡಿಸಿದ್ದರು.

ಈ ಅವಯಲ್ಲಿ ಅವರು ಎರಡು ಬಜೆಟ್ ಮಂಡಿಸಿದ್ದರೆ ನಂತರ 2008ರಿಂದ 2011ರವರೆಗೆ 4 ಹಾಗೂ ಕಳೆದ ವರ್ಷ ಒಂದು ಸೇರಿದಂತೆ ಈವರೆಗೂ ಏಳು ಬಜೆಟ್ ಮಂಡಿಸಿದ್ದರು. ಇಂದು 8ನೇ ಬಜೆಟ್ ಮಂಡಿಸುವ ಮೂಲಕ 2ನೇ ಅತಿಹೆಚ್ಚು ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಎಂಬ ದಾಖಲೆಯೂ ಬರೆದರು.

ಮಹಿಳೆಯರಿಗೆ ಭರ್ಜರಿ ಗಿಫ್ಟ್:

ವಿಶ್ವ ಮಹಿಳಾ ದಿನಾಚರಣೆಯ ದಿನದಂದೇ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು, ಮಹಿಳೆಯರಿಗೆ ಭರ್ಜರಿ ಗಿಫ್ಟ್ ನೀಡಿದ್ದಾರೆ. ಸ್ವ ಉದ್ಯೋಗಕ್ಕೆ ಒತ್ತು ನೀಡಿರುವಂತೆ ಅವರು, ಸ್ವಯಂ ಸಹಾಯಕ ಸಂಘಗಳೊಂದಿಗೆ ಸ್ವ ಉದ್ಯೋಗಕ್ಕಾಗಿ, ಮಹಿಳಾ ಉದ್ಯಮಿಗಳಿಗೆ ಶೇ.4ರಷ್ಟು ಬಡ್ಡಿದರದಲ್ಲಿ ಸಾಲ ಸೌಲಭ್ಯ ನೀಡುವುದಾಗಿ ಘೋಷಿಸಿದ್ದಾರೆ.

- Advertisement -

Related news

error: Content is protected !!