- Advertisement -
- Advertisement -
ಬೆಂಗಳೂರು: ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಅವರ ಸ್ಥಾನಕ್ಕೆ ಹಿರಿಯ ಐಪಿಎಸ್ ಅಧಿಕಾರಿ ಕಮಲ್ ಪಂತ್ ಅವರನ್ನು ನೇಮಕ ಮಾಡಲಾಗಿದೆ. ಭಾಸ್ಕರ್ ರಾವ್ ಅವರನ್ನು ಆಂತರಿಕ ಭದ್ರತಾ ವಿಭಾಗದ ಎಡಿಜಿಪಿ ಆಗಿ ವರ್ಗಾವಣೆ ಮಾಡಲಾಗಿದೆ.
ಕಮಲ್ ಪಂತ್ ಗೆ ಕಳೆದ ಬಾರಿ ಕೊನೆ ಕ್ಷಣದಲ್ಲಿ ಕಮಿಷನರ್ ಸ್ಥಾನ ಕೈತಪ್ಪಿ ಹೋಗಿತ್ತು. ಇದೀಗ ಗುಪ್ತಚರ ಇಲಾಖೆಯ ಎಡಿಜಿಪಿ ಆಗಿರುವ ಕಮಲ್ ಪಂತ್ ಅವರನ್ನು ಬೆಂಗಳೂರು ಕಮಿಷನರ್ ಆಗಿ ನೇಮಕ ಮಾಡಲಾಗಿದೆ. ಕಮಲ್ ಪಂತ್ ಹಾಗೂ ಭಾಸ್ಕರ್ ರಾವ್ 1990ರ ಐಪಿಎಸ್ ಬ್ಯಾಚ್ ನವರು. ಕಳೆದ ಆಗಸ್ಟ್ 2ಕ್ಕೆ ಭಾಸ್ಕರ್ ರಾವ್ ಬೆಂಗಳೂರು ಕಮಿಷನರ್ ಆಗಿ ಅಧಿಕಾರ ಸ್ವೀಕರಿಸಿದ್ದರು.
- Advertisement -