

ಬೆಂಗಳೂರು: ಸಹೋದ್ಯೋಗಿ ಯುವತಿಯನ್ನು ಮನೆಗೆ ಡ್ರಾಫ್ ಮಾಡುವ ವೇಳೆ ಬೈಕ್ ಅಡ್ಡಗಟ್ಟಿ ನಡುರಸ್ತೆಯಲ್ಲಿ ಯುವಕನ ಮೇಲೆ ಹಲ್ಲೆ ಮಾಡಿದ್ದ ಪ್ರಕರಣದಲ್ಲಿ ಆರೋಪಿಗಳನ್ನು ಸುದ್ದಗುಂಟೆಪಾಳ್ಯ ಪೊಲೀಸರು ಬಂಧಿಸಿದ್ದಾರೆ. ಹೊಸೂರು ರಸ್ತೆಯ ಡೇರಿ ವೃತ್ತದ ಬಳಿ ನಿನ್ನೆ ರಾತ್ರಿ ನಡೆದ ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಅದರನ್ವಯ ದೂರು ದಾಖಲಿಸಿದ್ದ ಪೊಲೀಸರು, ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಒಂದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಹಿಂದೂ ಯುವಕ ಹಾಗೂ ಮುಸ್ಲಿಂ ಯುವತಿ, ರಾತ್ರಿ ಕೆಲಸ ಮುಗಿಸಿ ಮನೆಗೆ ಹೊರಟಿದ್ದರು. ಅವರನ್ನು ಹಿಂಬಾಲಿಸಿದ್ದ ಗುಂಪು, ಬೈಕ್ ಅಡ್ಡಗಟ್ಟಿ ಗಲಾಟೆ ಮಾಡಿತ್ತು’ ಎಂದು ಪೊಲೀಸ್ ಮೂಲಗಳು ಹೇಳಿವೆ.


ಯುವತಿ ಹಾಗೂ ಯುವಕನ ಜೊತೆಯೂ ವಾದ ಮಾಡಿದ್ದ ಆರೋಪಿಗಳು, ಕುಟುಂಬದವರ ಮೊಬೈಲ್ ನಂಬರ್ ಪಡೆದು ಅವರ ಜೊತೆಯೂ ಕೆಟ್ಟದಾಗಿ ಮಾತನಾಡಿದ್ದರು. ಯುವಕನ ಮೇಲೆಯೂ ಹಲ್ಲೆ ಮಾಡಿದ್ದರು.ಈ ಕೃತ್ಯದ ವೀಡಿಯೋ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಇದರನ್ವಯ ಪೊಲೀಸರು ದೂರು ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಾಗಿದೆ.










