Sunday, August 14, 2022
spot_imgspot_img
spot_imgspot_img

ಉತ್ತರ ಪ್ರದೇಶ, ಕಾಶ್ಮೀರದಿಂದ ಬಂದು ಸರ ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಗ್ಯಾಂಗ್ ಅಂದರ್!

- Advertisement -G L Acharya G L Acharya
- Advertisement -

ಬೆಂಗಳೂರು: ಉತ್ತರ ಪ್ರದೇಶ ಮತ್ತು ಕಾಶ್ಮೀರದಿಂದ ಬೆಂಗಳೂರು ನಗರಕ್ಕೆ ಬಂದು ಸರ ಕಳ್ಳತನ ಮಾಡುತ್ತಿದ್ದ ನಾಲ್ವರನ್ನು ಪಶ್ಚಿಮ ವಿಭಾಗ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ರಾಹುಲ್, ಗೌರವ್, ನಿತಿನ್, ರಿಯಾಜ್ ಅಹ್ಮದ್ ಮೀರ್ ಎನ್ನಲಾಗಿದೆ. ವಿಜಯನಗರದಲ್ಲಿ ಪಾದಚಾರಿ ಮಹಿಳೆ ಬಳಿ ಬೈಕ್ ನಲ್ಲಿ ಬಂದ ಆರೋಪಿಗಳ ಚಿನ್ನದ ಸರ ಕದ್ದು ಪರಾರಿ ಆಗಿದ್ದರು. ಇದರ ತನಿಖೆ ಕೈಗೊಂಡ ಪಶ್ಚಿಮ ವಿಭಾಗ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಆರೋಪಿಗಳ ವಿಚಾರಣೆಯಿಂದ ವಿಜಯನಗರ, ಕೆಂಗೇರಿ, ಮಾಗಡಿ ರಸ್ತೆ, ತಿಲಕನಗರದಲ್ಲಿ ನಡೆದಿರುವ ಸರ ಕಳವು ಪ್ರಕರಣಗಳು ಬೆಳಕಿಗೆ ಬಂದಿವೆ. 13 ಲಕ್ಷ ಮೌಲ್ಯದ 230 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

Related news

error: Content is protected !!