ಬೆಂಗಳೂರು: ಕೊರೊನಾ ವಿಚಾರದಲ್ಲಿ ಸರ್ಕಾರ ಅವ್ಯವಹಾರ ನಡೆಸಿಲ್ಲ ಎಂದಾದರೆ ತನಿಖೆಗೆ ಭಯವೇಕೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.
ಸಿದ್ದರಾಮಯ್ಯ ಆರೋಪಕ್ಕೆ ನಿನ್ನೆ ಬಿಜೆಪಿ ನಾಯಕರು ಸುದ್ದಿಗೋಷ್ಠಿ ನಡೆಸಿ ನಾವು ಅವ್ಯವಹಾರ ನಡೆಸಿಲ್ಲ. ಹೀಗಾಗಿ ದಾಖಲೆ ರಹಿತ ಆರೋಪಕ್ಕೆ ತನಿಖೆ ಅಗತ್ಯವಿಲ್ಲ ಎಂದು ಹೇಳಿದ್ದರು.
ಈ ಹಿನ್ನಲೆಯಲ್ಲಿ ಇಂದು ಮತ್ತೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ ಬಿಜೆಪಿ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ. ನೀವು ಪ್ರಮಾಣಿಕರಾಗಿದ್ದರೆ ನ್ಯಾಯಾಂಗ ತನಿಖೆ ನಡೆಸಿ. ತಮ್ಮನ್ನ ತಾವು ಪ್ರಾಮಾಣಿಕರೆಂದು ಸಾಬೀತು ಮಾಡಿಕೊಳ್ಳಿ ಎಂದು ಹೇಳಿದ್ದಾರೆ.
ಇನ್ನು ಸಚಿವ ಸುಧಾಕರ್ ಮಾತಿಗೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ಪ್ರಸ್ತಾವನೆ, ಮಂಜೂರಾತಿ, ಅನುಮೋದನೆ ವೆಚ್ಚ ಅಂದ್ರೆ ನನಗೆ ಗೊತ್ತಿಲ್ಲದೇ ನಾನು 13 ಬಜೆಟ್ ಮಂಡಿಸಿದ್ದೇನಾ..? ನಾನು ಎಷ್ಟು ವರ್ಷ ಮಂತ್ರಿ ಆಗಿದ್ದೆ. ಸಿಎಂ, ಡಿಸಿಎಂ ಆಗಿಯೂ ಕರ್ತವ್ಯ ನಿರ್ವಹಿಸಿದ್ದೇನೆ. ಆದರೆ ಸುಧಾಕರ್ ಎಷ್ಟು ವರ್ಷದಿಂದ ಸಚಿವರಾಗಿದ್ದಾರೆ ಎಂದು ಪ್ರಶ್ನಿಸಿದ್ರು.