Thursday, May 2, 2024
spot_imgspot_img
spot_imgspot_img

ಬೆಂಗಳೂರು ತಂತ್ರಜ್ಞಾನ ಮೇಳಕ್ಕೆ ಇಂದು ಪ್ರಧಾನಿ ಮೋದಿ ಚಾಲನೆ; ವಿಡಿಯೋ ಕಾನ್ಫರೆನ್ಸ್​ ಮೂಲಕ ಉದ್ಘಾಟನೆ​

- Advertisement -G L Acharya panikkar
- Advertisement -

ಬೆಂಗಳೂರು(ನ. 19): ಕೋವಿಡ್ ಸವಾಲಿನ ನಡುವೆ ಇದೇ ಮೊದಲ ಬಾರಿಗೆ ವರ್ಚ್ಯುಯಲ್ ಆಗಿ ನಡೆಯಲಿರುವ ಭಾರತದ ಮಹತ್ವದ ತಾಂತ್ರಿಕ ಕಾರ್ಯಕ್ರಮವಾದ “ಬೆಂಗಳೂರು ತಂತ್ರಜ್ಞಾನ ಮೇಳ-2020 (ಬಿಟಿಎಸ್-2020)” ಕ್ಕಾಗಿ  ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

ಇಂದು ಬೆಳಿಗ್ಗೆ 11ಗಂಟೆಗೆ ವಿಡಿಯೋ ಕಾನ್ಫರೆನ್ಸ್​​ ಮೂಲಕ ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮೂರು ದಿನಗಳ ಈ ಮೇಳವನ್ನು  ಜನೋಪಯೋಗಕ್ಕೆ ತಂತ್ರಜ್ಞಾನ ಬಳಸುವ ಬಗ್ಗೆ ಪ್ರಧಾನಿ ಮೋದಿ ಸ್ವತಃ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. 

ಕಾರ್ಯಕ್ರಮದಲ್ಲಿ ಆಸ್ಟ್ರೇಲಿಯಾ ಪ್ರಧಾನ ಮಂತ್ರಿ ಸ್ಕಾಟ್ ಮಾರಿಸನ್ ಮತ್ತು ಸ್ವಿಸ್​ ಗಣರಾಜ್ಯದ ಉಪರಾಷ್ಟ್ರಾಧ್ಯಕ್ಷ ಗೈ ಪರ್ಮೆಲಿನ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಗೌರವ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಕೇಂದ್ರ ಸರ್ಕಾರದ ಸಂವಹನ, ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್ ಅವರು ಆನ್ ಲೈನ್ ಮೂಲಕ ಪಾಲ್ಗೊಳ್ಳಲಿದ್ದಾರೆ.

ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಐಟಿ/ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ, ಸಚಿವ ಜಗದೀಶ್ ಶೆಟ್ಟರ್ ಸಮಾರಂಭದಲ್ಲಿ ಹಾಜರಿರಲಿದ್ದಾರೆ.

- Advertisement -

Related news

error: Content is protected !!