- Advertisement -
- Advertisement -
ಬೆಂಗಳೂರು: ಕೊರೊನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಬೆಂಗಳೂರು ಸಂಪೂರ್ಣ ಬಂದ್ ಆಗಿದೆ. 2ನೇ ದಿನದ ಲಾಕ್ ಡೌನ್ ನಲ್ಲಿ ಪೊಲೀಸರು ಫುಲ್ ಅಲರ್ಟ್ ಆಗಿದ್ದು,ಅನಗತ್ಯವಾಗಿ ರಸ್ತೆಗಳಿದ ಜನರಿಗೆ ಬಿಸಿಮುಟ್ಟಿಸುತ್ತಿದ್ದಾರೆ. ಈಗಗಾಲೇ ಹಲವಾರು ವಾಹನಗಳನ್ನು ಸೀಜ್ ಮಾಡಲಾಗಿದೆ. ಚೆಕ್ ಪೋಸ್ಟ್ ನಲ್ಲಿ ಪೊಲೀಸರು ತಪಾಸಣೆ ನಡೆಸುತ್ತಿದ್ದಾರೆ.
ಕಂಠೀರವ ಸ್ಟೇಡಿಯಂ ಬಳಿ ಪೊಲೀಸರು ತಪಾಸಣೆ ನಡೆಸುತ್ತಿದ್ದು, ಅನಗತ್ಯವಾಗಿ ಬರುವ ವಾಹನಗಳನ್ನು ವಾಪಸ್ ಕಳುಹಿಸುತ್ತಿದ್ದಾರೆ. ಇನ್ನು ಟೌನ್ ಹಾಲ್ ಮುಂಭಾಗ ಹೆಚ್ಚಿನ ಸಂಖ್ಯೆಯಲ್ಲಿ ವಾಹನಗಳು ಓಡಾಡುತ್ತಿರುವ ಹಿನ್ನಲೆಯಲ್ಲಿ ಸ್ಥಳದಲ್ಲಿ 10 ಮಂದಿ ಪೊಲೀಸ್ ಸಿಬ್ಬಂದಿ ಮೊಕ್ಕಂ ಹೂಡಿದ್ದಾರೆ.
ಇನ್ನು ಮಧ್ಯಾಹ್ನ 12 ಗಂಟೆ ತನಕ ದಿನಸಿ, ತರಕಾರಿ ಸೇರಿದಂತೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ. ಎಂದಿನಂತೆ ಮೆಡಿಕಲ್ ಸೇವೆ ಲಭ್ಯವಿರುತ್ತದೆ.
- Advertisement -