Saturday, June 27, 2026
spot_imgspot_img
spot_imgspot_img

ಭೀಕರ ಬೆಂಕಿ ಅವಘಡ : ಒಂದೇ ಕುಟುಂಬದ ನಾಲ್ವರು ಸೇರಿ ಐದು ಮಂದಿ ಸಜೀವ ದಹನ

- Advertisement -
- Advertisement -

ಬೆಂಗಳೂರು: ಇಲ್ಲಿನ ಕೆ. ಆರ್ ಮಾರ್ಕೆಟ್ ಬಳಿಯ ನಗರ್ತ ಪೇಟೆಯ ವಾಣಿಜ್ಯ ಕಟ್ಟಡದಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದ ಅಗ್ನಿ ದುರಂತದಲ್ಲಿ ಒಂದೇ ಕುಟುಂಬದ ನಾಲ್ವರು ಸೇರಿ ಐವರು ಸಜೀವ ದಹನವಾಗಿದ್ದಾರೆ.

ದುರಂತದಲ್ಲಿ ಸಜೀವ ಸುಟ್ಟುಕರಕಲಾದವರನ್ನು ಮದನ್ (38), ಅವರ ಪತ್ನಿ ಸಂಗೀತಾ (33) ಪುತ್ರರಾದ ಮಿತೇಶ್ (8), ವಿಹಾನ್ (5) ಎಂದು ಗುರುತಿಸಲಾಗಿದ್ದು, ಮತ್ತೊಂದು ಮಹಡಿಯಲ್ಲಿ ಸುರೇಶ್ ಎಂಬವರೂ ಸುಟ್ಟು ಕರಕಲಾಗಿದ್ದಾರೆ.ಘಟನಾ ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಭೇಟಿ ನೀಡಿ ಪರಿಶೀಲಿಸಿ ರಾತ್ರಿ 2.30ರ ಸುಮಾರಿಗೆ ಅಗ್ನಿ ಅವಗಢ ಸಂಭವಿಸಿದ ಮಾಹಿತಿ ಬಂತು. ಅಗ್ನಿಶಾಮಕ ದಳದವರು ಮತ್ತು ಪೊಲೀಸರು ಪರಿಶೀಲನೆ ಮಾಡ್ತಿದ್ದಾರೆ. ಗೌಂಡ್ ಫ್ಲೋರ್‌ನಲ್ಲಿರುವ ಗೋಡೌನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ನಂತರ ಅದು ಮೇಲಿನ ಫ್ಲೋರ್‌ಗಳಿಗೆ ಆವರಿಸಿದೆ. ಬೆಂಕಿ ಹೊತ್ತಿಕೊಂಡ ಕೂಡಲೇ ಕಟ್ಟಡದಲ್ಲಿದ್ದ ಬಹುತೇಕ ಜನ ಓಡಿ ಹೋಗಿದ್ದಾರೆ. ಆದ್ರೆ ಒಂದು ಫ್ಯಾಮಿಲಿ ಮಾತ್ರ ಬೆಂಕಿ ಕೆನ್ನಾಲಿಗೆಗೆ ಸಿಲುಕಿಕೊಂಡಿದೆ ಎಂದು ತಿಳಿಸಿದ್ದಾರೆ.ಎರಡು ಮೃತದೇಹಗಳನ್ನ ಈಗಾಗಲೇ ಹೊರ ತೆಗೆಯಲಾಗಿದೆ. ಮೇಲಿನ ಫ್ಲೋರ್‌ನಲ್ಲಿ ಬೆಂಕಿ, ಹೊಗೆ ಆವರಿಸಿ ಒಳಗಡೆ ಹೋಗುವುದಕ್ಕೆ ಬಹಳ ಪ್ರಯಾಸವಾಗಿತ್ತು. ಕಾರ್ಯಾಚರಣೆ ಮುಂದುವರಿಸಲಾಗಿದೆ.

ಅಗ್ನಿಶಾಮಕ ಸಿಬ್ಬಂದಿ, ವಿಧಿವಿಜ್ಞಾನ ಪ್ರಯೋಗಾಲಯ ಅಧಿಕಾರಿಗಳು ಹಾಗೂ ರಕ್ಷಣಾ ತಂಡದವರು ಕಾರ್ಯಾಚರಣೆ ಮಾಡುತ್ತಿದ್ದಾರೆ. ಇನ್ನೂ ಮೃತದೇಹಗಳು ಇರುವ ಶಂಕೆ ಇದೆ ಎಂದು ತಿಳಿಸಿದ್ದಾರೆ.ಕೆ.ಆರ್ ಮಾರ್ಕೆಟ್ ಬಳಿಯ ನಗರ್ತಪೇಟೆಯ ವಾಣಿಜ್ಯ ಕಟ್ಟಡದಲ್ಲಿದ್ದ ಮಹಡಿ ಮನೆಯಲ್ಲಿ ತಡರಾತ್ರಿ ಬೆಂಕಿ ಕಾಣಿಸಿಕೊಂಡಿತ್ತು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ್ದ ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಸ್ಥಳದಲ್ಲಿ ಅಂಬುಲೆನ್ಸ್‌ಗಳನ್ನ ನಿಯೋಜನೆ ಮಾಡಲಾಗಿದೆ.

- Advertisement -

Related news

error: Content is protected !!