- Advertisement -
- Advertisement -




ಕರ್ನೂಲ್: ಹೈದರಾಬಾದ್ನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಬೆಂಕಿಗೆ ಆಹುತಿಯಾಗಿದ್ದು, ಬಸ್ನಲ್ಲಿದ್ದ 20ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಘಟನೆ ಇಂದು ಮುಂಜಾನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ನಡೆದಿದೆ.
ಕರ್ನೂಲ್ ಉಪನಗರ ಚಿನ್ನಟೇಕೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಕಾವೇರಿ ಟ್ರಾವೆಲ್ಸ್ಗೆ ಸೇರಿದ ಬಸ್ ಬೆಂಕಿಗಾಹುತಿಯಾಗಿದೆ. ಅವಘಡದಲ್ಲಿ ಹಲವಾರು ಮಂದಿ ಜೀವಂತ ಸುಟ್ಟುಹೋಗಿದ್ದಾರೆ.ಬಸ್ನಲ್ಲಿ 39 ಪ್ರಯಾಣಿಕರು ಇದ್ದು 20ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿ, 12 ಮಂದಿ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ಎಂದು ವರದಿಯಾಗಿದೆ.
- Advertisement -








