ಸಭೆಯಲ್ಲಿ ಹಿರಿಯ ವಕೀಲ ಅರುಣ್ ಶ್ಯಾಮ್‌ರಿಂದ ಒಂದು ಗಂಟೆಯ ವಿಶೇಷ ಉಪನ್ಯಾಸ




ಬೆಂಗಳೂರು: ಭಾರತೀಯ ಜನತಾ ಪಕ್ಷದ ವತಿಯಿಂದ ಮತದಾರರ ಪಟ್ಟಿ ಪರಿಷ್ಕರಣೆ (ಎಸ್.ಐ.ಆರ್.) ಕುರಿತು ವಿಶೇಷ ಸಭೆಯು ಬೆಂಗಳೂರಿನ ಜಗನ್ನಾಥ ಭವನದಲ್ಲಿ ಇಂದು ನಡೆಯಿತು.
ಸಭೆಯನ್ನು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಉದ್ಘಾಟಿಸಿದರು. ರಾಜ್ಯದ ವಿವಿಧ ಜಿಲ್ಲೆಗಳಿಂದ ಬಿಜೆಪಿ ಕಾನೂನು ಪ್ರಕೋಷ್ಟದ ಪದಾಧಿಕಾರಿಗಳು ಹಾಗೂ ಪ್ರಮುಖರು ಸಭೆಯಲ್ಲಿ ಭಾಗವಹಿಸಿದ್ದರು.

ಮುಖ್ಯ ಅತಿಥಿಯಾಗಿ ಮಾಜಿ ಹೆಚ್ಚುವರಿ ಅಡ್ವೋಕೇಟ್ ಜನರಲ್ ಹಾಗೂ ಹಿರಿಯ ವಕೀಲ ಅರುಣ್ ಶ್ಯಾಮ್ ಭಾಗವಹಿಸಿ, ಮತದಾರರ ಪಟ್ಟಿ ಪರಿಷ್ಕರಣೆ, ಕಾನೂನು ಅಂಶಗಳು ಮತ್ತು ಕಾರ್ಯತಂತ್ರಗಳ ಕುರಿತು ಸುಮಾರು ಒಂದು ಗಂಟೆ ಕಾಲ ವಿಶೇಷ ಉಪನ್ಯಾಸ ನೀಡಿ ಮಾರ್ಗದರ್ಶನ ಮಾಡಿದರು.

ಸಭೆಯಲ್ಲಿ ರಾಜ್ಯ ಪ್ರಕೋಷ್ಟಗಳ ಸಂಯೋಜಕರೂ, ಎಸ್.ಐ.ಆರ್. ರಾಜ್ಯ ಸಂಚಾಲಕರೂ ಆದ ಎಸ್. ದತ್ತಾತ್ರಿ ಅವರು ಗೌರವ ಉಪಸ್ಥಿತಿ ವಹಿಸಿ ಸಭೆಯ ಉದ್ದೇಶ ಹಾಗೂ ಮುಂದಿನ ಕಾರ್ಯಯೋಜನೆ ಕುರಿತು ಮಾಹಿತಿ ನೀಡಿದರು.
ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಬಿಜೆಪಿ ಕಾನೂನು ಪ್ರಕೋಷ್ಟದ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿ ಮತದಾರರ ಪಟ್ಟಿ ಪರಿಷ್ಕರಣೆ ಸಂಬಂಧ ಅಗತ್ಯ ಮಾರ್ಗಸೂಚಿಗಳನ್ನು ಪಡೆದರು.

ಇತ್ತೀಚಿನ ದಿನಗಳಲ್ಲಿ ಹಿರಿಯ ವಕೀಲ ಅರುಣ್ ಶ್ಯಾಮ್ ಅವರು ಬಿಜೆಪಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದು, ಪಕ್ಷದ ವಿವಿಧ ಕಾರ್ಯಕ್ರಮಗಳಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದಾರೆ.








