Saturday, July 18, 2026
spot_imgspot_img
spot_imgspot_img

ಕ್ಷುಲ್ಲಕ ಕಾರಣಕ್ಕೆ ತಂದೆಯನ್ನೇ ಕೊಲೆಗೈದ ಮಗನಿಗೆ ಜೀವಾವಧಿ ಶಿಕ್ಷೆ

- Advertisement -
- Advertisement -

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ತಂದೆಯನ್ನೇ ಕಬ್ಬಿಣದ ರಾಡ್‌ನಿಂದ ಹೊಡೆದು ಕೊಲೆ ಮಾಡಿದ್ದ ಮಗನಿಗೆ ಬೆಂಗಳೂರಿನ ಸಿಸಿಹೆಚ್-68 ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಜೊತೆಗೆ 5 ಸಾವಿರ ರೂ. ದಂಡವನ್ನೂ ವಿಧಿಸಲಾಗಿದೆ.

ಮನೆಯಲ್ಲಿ ನಡೆದ ಜಗಳವೇ ಕೊಲೆಗೆ ಕಾರಣವಾಗಿತ್ತು. ಕಳೆದ ಜನವರಿಯಲ್ಲಿ ರಾಜಾಜಿನಗರ 4ನೇ ಬ್ಲಾಕ್‌ನ ಮನೆಯಲ್ಲಿ ರಘು ಎಂಬಾತ ತನ್ನ ತಂದೆ ರಾಮಚಂದ್ರ ಅವರ ಮೇಲೆ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದ. ಈ ಸಂಬಂಧ ರಾಜಾಜಿನಗರ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ ಸೆಕ್ಷನ್ 103 ಅಡಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ನಡೆಸಿದ ಇನ್ಸ್‌ಪೆಕ್ಟರ್ ಪ್ರಮೋದ್ ಕುಮಾರ್, ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ವೇಳೆ ಸ್ಟೇಟ್ ಪಬ್ಲಿಕ್ ಪ್ರಾಸಿಕ್ಯೂಟರ್ ಚಿನ್ನವೆಂಕಟರವಣಪ್ಪ ಹಾಗೂ ಆರ್.ವಿ. ಭಟ್ ವಾದ ಮಂಡಿಸಿದ್ದರು.

ವಾದ-ಪ್ರತಿವಾದ ಆಲಿಸಿದ ಬೆಂಗಳೂರಿನ ಸಿಸಿಹೆಚ್-68 ನ್ಯಾಯಾಲಯದ ನ್ಯಾಯಾಧೀಶ ಕೆ.ಎಸ್ ಭರತ್‌ಕುಮಾರ್, ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ 5 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!