Monday, June 8, 2026
spot_imgspot_img
spot_imgspot_img

ಬೆಂಗಳೂರು: ಪ್ರಾಸಿಕ್ಯೂಷನ್ ವಿರೋಧಿಸಿ ನಡೆಸುತ್ತಿದ್ದ ಸುದ್ದಿಗೋಷ್ಢಿ ವೇಳೆ ಕಾಂಗ್ರೇಸ್‌ ಕಾರ್ಯಕರ್ತ ಹೃದಯಾಘಾತದಿಂದ ಸಾವು

- Advertisement -
- Advertisement -

ಬೆಂಗಳೂರು: ಸಿಎಂ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವ ವಿಚಾರವಾಗಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುತ್ತಿದೆ. ಇದರ ನಡುವೆಯೇ ಪ್ರಾಸಿಕ್ಯೂಷನ್ ವಿರೋಧಿಸಿ ಸುದ್ದಿಗೋಷ್ಢಿ ವೇಳೆಯೇ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ, ಅಲ್ಪಸಂಖ್ಯಾತರ ಸಂಘದ ಮುಖಂಡ ರವಿಚಂದ್ರನ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಇಂದು ಮಧ್ಯಾಹ್ನದ ವೇಳೆಗೆ ಗವರ್ನರ್ ಪ್ರಾಸಿಕ್ಯೂಷನ್ ವಿರೋಧಿಸಿ ಹಿಂದುಳಿದ ವರ್ಗಗಳ ಮುಖಂಡರಿಂದ ಸುದ್ದಿಗೋಷ್ಠಿ ಕರೆಯಲಾಗಿತ್ತು. ಸುದ್ದಿಗೋಷ್ಠಿ ವೇಳೆ ಹೃದಯಾಘಾತದಿಂದ ಕಾಂಗ್ರೆಸ್ ಕಾರ್ಯಕರ್ತ, ಸಂಘದ ಸದಸ್ಯ ಸಿ.ಕೆ.ರವಿಚಂದ್ರನ್ ಕುಸಿದು ಬಿದ್ದಿದ್ದರು. ಕೂಡಲೇ ಅವರನ್ನು ಹತ್ತಿರದ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ಪೋರ್ಟಿಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುವ ಕೆಲಸ ಮಾಡಿದರೂ ಅವರು ಸಾವನ್ನಪ್ಪಿದ್ದಾಗಿ ವೈದ್ಯರು ಘೋಷಣೆ ಮಾಡಿದ್ದಾರೆ.

- Advertisement -

Related news

error: Content is protected !!