Wednesday, July 22, 2026
spot_imgspot_img
spot_imgspot_img

ಬೆಂಗಳೂರು: ಆಕಸ್ಮಿಕ ಬೆಂಕಿ ಅವಘಡ- ಉಸಿರುಗಟ್ಟಿ ಮಂಗಳೂರು ಮೂಲದ ಯುವತಿ ಸಾವು!

- Advertisement -
- Advertisement -

ಬೆಂಗಳೂರು: ಫ್ಲಾಟ್ ನಲ್ಲಿ ಸಂಭವಿಸಿದ ಆಕಸ್ಮಿಕ ಬೆಂಕಿ ಅವಘಡದಿಂದ ಉಂಟಾದ ಹೊಗೆಯಿಂದ ಉಸಿರು ಗಟ್ಟಿ ಮಂಗಳೂರು ಕಾವೂರಿನ ಶರ್ಮಿಳಾ (34) ಎಂಬಾಕೆ ಸಾವನಪ್ಪಿದ ಘಟನೆ ಬೆಂಗಳೂರಿನ ರಾಮ ಮೂರ್ತಿನಗರ ಪೊಲೀಸ್ ಠಾಣೆ ವ್ಯಾಪ್ತಿಯ ಸುಬ್ರಹ್ಮಣ್ಯ ಲೇಔಟ್‌ನ ಅಪಾರ್ಟ್ ಮೆಂಟ್‌ನಲ್ಲಿ ಶನಿವಾರ ರಾತ್ರಿ ಸಂಭವಿಸಿದೆ.

ಶರ್ಮಿಳಾ ಒಂದೂವರೆ ವರ್ಷದಿಂದ ಸುಬ್ರಹ್ಮಣ್ಯ ಲೇಔಟ್‌ನ ಅಪಾರ್ಟ್ ಮೆಂಟ್ ನಲ್ಲಿ ಸ್ನೇಹಿತೆ ಜತೆ ವಾಸವಾಗಿದ್ದರು. ತಮ್ಮ ಮನೆ ಸಮೀಪದ ಸಾಫ್ಟ್ ವೇರ್ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದು, ರಜೆ ಇದ್ದರಿಂದ ಈಕೆಯ ಸ್ನೇಹಿತೆ ಊರಿಗೆ ತೆರಳಿದ್ದರಿಂದ ಒಬ್ಬರೇ ಇದ್ದರು. ರಾತ್ರಿ 11 ಗಂಟೆ ಸುಮಾರಿಗೆ ಮನೆಯ ಕೋಣೆಯೊಂದರಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ದಟ್ಟವಾದ ಹೊಗೆ ಆವರಿಸಿದೆ. ಆಗ ಪಕ್ಕದ ಕೋಣೆಯಲ್ಲಿದ್ದ ಶರ್ಮಿಳಾ ಕೂಡಲೇ ಆ ಕೋಣೆ ಕಡೆ ಬರಲು ಮುಂದಾಗಿದ್ದಾರೆ. ಇದೇ ವೇಳೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಹೀಗಾಗಿ ಕತ್ತಲೆಯಲ್ಲಿ ಕಿಟಕಿ ಹಾಗೂ ಬಾಗಿಲು ತೆರೆಯಲು ಸಾಧ್ಯವಾಗಿಲ್ಲ. ಮನೆಯ ತುಂಬೆಲ್ಲ ದಟ್ಟವಾದ ಹೊಗೆ ಆವರಿಸಿದ್ದ ಪರಿಣಾಮ ಉಸಿರುಗಟ್ಟಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

- Advertisement -

Related news

error: Content is protected !!