Wednesday, July 22, 2026
spot_imgspot_img
spot_imgspot_img

ಬೆಂಗಳೂರು: ಕತ್ತು ಹಿಸುಕಿ ವೃದ್ಧೆಯ ಕೊಲೆ – ಚಿನ್ನಾಭರಣ ದೋಚಿ ಆರೋಪಿಗಳು ಪರಾರಿ!

- Advertisement -
- Advertisement -

ನೆಲಮಂಗಲ: ಕತ್ತು ಹಿಸುಕಿ ವೃದ್ಧೆಯನ್ನು ಕೊಲೆ ಮಾಡಿ, ಚಿನ್ನಾಭರಣ ದೋಚಿ ಆರೋಪಿಗಳು ಪರಾರಿಯಾಗಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲ ನಗರದ ಪೇಟೆ ಬೀದಿಯಲ್ಲಿ ನಡೆದಿದೆ.

ಶೋಭಾ (69) ಮೃತ ಮಹಿಳೆ ಎಂದು ಗುರುತಿಸಲಾಗಿದ್ದು, ವದ್ಧ ದಂಪತಿ ಇಬ್ಬರೇ ಮನೆಯಲ್ಲಿದ್ದಾಗ ಈ ಘಟನೆ ನಡೆದಿದೆ. ಇನ್ನೂ ಮೃತ ಮಹಿಳೆಯ ಪತಿ ರಂಗನಾಥ್ ವೀಲ್ ಚೇರ್‌ನಲ್ಲಿದ್ದಾರೆ ಎಂದು ತಿಳಿದುಬಂದಿದೆ.ಮನೆಯಲ್ಲಿ ವೃದ್ಧ ದಂಪತಿ ಮಾತ್ರ ಇರುವುದನ್ನು ಗಮಿನಿಸಿದ್ದ ದರೋಡೆಕೋರರು ವೃದ್ಧೆಯ ಚಿನ್ನಾಭರಣದ ಮೇಲೆ ಕಣ್ಣು ಹಾಕಿದ್ದರು. ಬುಧವಾರ (ಫೆ.18) ಸಂಜೆ ಮನೆಗೆ ನುಗ್ಗಿ ವೃದ್ಧೆಯ ಕತ್ತು ಹಿಸುಕಿ ತಲೆಗೆ ಹೊಡೆದು ಕೊಲೆ ಮಾಡಿ, ಆರೋಪಿಗಳು ಎಸ್ಕೇಪ್ ಆಗಿದ್ದಾರೆ. ಚಿನ್ನಾಭರಣ ದೋಚಿರುವ ಶಂಕೆಯನ್ನ ಸ್ಥಳೀಯರು ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ನೆಲಮಂಗಲ ಟೌನ್ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಶ್ವಾನದಳ ಆಗಮಿಸಿದೆ. ದರೋಡೆ ಬಗ್ಗೆ ಮಾಹಿತಿ ಸಂಗ್ರಹಿಸಲು ಪೊಲೀಸರು ಅಕ್ಕಪಕ್ಕದ ಮನೆಯ ಸಿಸಿಟಿವಿಯನ್ನ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ವರದಿ ಮೂಲಕ ತಿಳಿದು ಬಂದಿದೆ.

- Advertisement -

Related news

error: Content is protected !!