Wednesday, July 22, 2026
spot_imgspot_img
spot_imgspot_img

ಬೆಂಗಳೂರು: ಬಿಕ್ಲು ಶಿವ ಕೊಲೆ ಪ್ರಕರಣ; ಶಾಸಕ ಬೈರತಿ ಬಸವರಾಜ್ 7 ದಿನ ಸಿಐಡಿ ಕಸ್ಟಡಿಗೆ..!

- Advertisement -
- Advertisement -

ಬೆಂಗಳೂರು: ಬಿಕ್ಲು ಶಿವ ಕೊಲೆ ಕೇಸ್‌ಲ್ಲಿ ಶಾಸಕ ಬೈರತಿ ಬಸವರಾಜ್ ಅವರನ್ನು ನ್ಯಾಯಾಲಯ 7 ದಿನಗಳ ಕಾಲ ಸಿಐಡಿ ಕಸ್ಟಡಿಗೆ ನೀಡಿದೆ.

ಬೈರತಿ ಬಸವರಾಜ್ ಅವರನ್ನು ಕೋರಮಂಗಲದಲ್ಲಿರುವ 42ನೇ ಎಸಿಜೆಎಂ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದ ವೇಳೆ ಶಾಸಕರ ಆಂಜಿಯೋಗ್ರಾಮ್ ರಿಪೋರ್ಟ್‌ನ್ನು ನ್ಯಾಯಾಧೀಶರಿಗೆ ತನಿಖಾಧಿಕಾರಿ ಡಿವೈಎಸ್‌ಪಿ ಗೌತಮ್ ಸಲ್ಲಿಸಿದರು. ವರದಿಯನ್ನು ಪರಿಶೀಲಿಸಿ, ವಿಚಾರಣೆ ನಡೆಸಿದ ನ್ಯಾಯಾಧೀಶರು, ಭೈರತಿ ಬಸವರಾಜ್ ಅವರನ್ನು ಸಿಐಡಿ ಕಸ್ಟಡಿಗೆ ನೀಡಿ ಆದೇಶಿಸಿದ್ದಾರೆ.

ಫೆ.12 ರಂದು ಅಹಮದಾಬಾದ್‌ನಿಂದ ಬೆಂಗಳೂರಿಗೆ ಆಗಮಿಸಿದ್ದ ಬೈರತಿ ಬಸವರಾಜ್‌ ಅವರನ್ನು ಪೊಲೀಸರು ಬಂಧಿಸಿದ್ದರು. ಮರುದಿನ ಆರೋಗ್ಯ ತಪಾಸಣೆ ನಡೆಸಿದ್ದ ವೇಳೆ ಅವರಿಗೆ ಇಸಿಜಿಯಲ್ಲಿ ಸಮಸ್ಯೆ ಕಾಣಿಸಿಕೊಂಡಿತ್ತು. ಬಳಿಕ ಅವರಿಗೆ ಜಯದೇವ ಆಸ್ಪತ್ರೆಯಲ್ಲಿ ಆಂಜಿಯೋಗ್ರಾಮ್ ಮಾಡಿಸಲಾಗಿತ್ತು ಎಂದು ತಿಳಿದುಬಂದಿದೆ.

ಹೈಕೋರ್ಟ್‌ನಲ್ಲಿ ನಿರೀಕ್ಷಣಾ ಜಾಮೀನು ವಜಾಗೊಂಡ ಬೆನ್ನಲ್ಲೇ ಸುಪ್ರೀಂಕೋರ್ಟ್ ಮೊರೆ ಹೋಗಿದ್ದ ಬೈರತಿ ಬಸವರಾಜ್‌ಗೆ ಅಲ್ಲಿಯೂ ಹಿನ್ನಡೆಯಾಗಿತ್ತು.

- Advertisement -

Related news

error: Content is protected !!