- Advertisement -
- Advertisement -



ಬೆಂಗಳೂರು: ಬೆಂಗಳೂರಿನ ಕಾಡುಗೋಡಿಯ ಸಾದರಮಂಗಲದಲ್ಲಿ ಬಿಎಂಟಿಸಿ ಬಸ್ಸಿಗೆ ರೈಲು ಡಿಕ್ಕಿ ಹೊಡೆದ ಘಟನೆ ನಡೆದಿದ್ದು, ಬಸ್ಸಿನಲ್ಲಿ ಪ್ರಯಾಣಿಕರಿಲ್ಲದ ಕಾರಣ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ ಬಸ್ ಸಂಪೂರ್ಣ ನಜ್ಜುಗುಜ್ಜಾಗಿದೆ.
ಸಾದರಮಂಗಲದಲ್ಲಿ ಪ್ರಯಾಣಿಕರನ್ನು ಇಳಿಸಿ ಖಾಲಿ ಬಸ್ಸು ಡಿಪೋಗೆ ಚಲಿಸುತ್ತಿದ್ದ ಸಂದರ್ಭದಲ್ಲಿ ಟಾಟಾ ನಗರಕ್ಕೆ ತೆರಳುತ್ತಿದ್ದ ಪ್ರಯಾಣಿಕರ ರೈಲು ಡಿಕ್ಕಿ ಹೊಡೆದಿದೆ.
ಡಿಪೋ ಸಂಖ್ಯೆ 51ಕ್ಕೆ ತೆರಳುತ್ತಿದ್ದ ಬಿಎಂಟಿಸಿ ಬಸ್ ಇಕ್ಕಟ್ಟಿನಲ್ಲಿ ಹಿಂಬದಿ ಚಲಿಸಿ, ಮುಂದಕ್ಕೆ ಹೋಗುವ ಹಂತದಲ್ಲಿ ರೈಲಿನ ಬರುವಿಕೆಯನ್ನು ಚಾಲಕ ಗಮನಿಸದೇ ಇರುವುದು ಈ ದುರಂತಕ್ಕೆ ಕಾರಣವಾಗಿದೆ.
ಘಟನಾ ಸ್ಥಳಕ್ಕೆ ರೈಲ್ವೆ ಇಲಾಖೆಯ ಅಧಿಕಾರಿಗಳು ಹಾಗೂ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ತನಿಖೆ ಆರಂಭಿಸಿದ್ದಾರೆ.
- Advertisement -








