ಯಾದಗಿರಿ: ರಾಮನಗರ ಜಿಲ್ಲೆಯ ಬಿಡದಿ ಬಳಿ, ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಿಮ್ಮೇಗೌಡ ಮರವೊಂದಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಬೆಂಗಳೂರು ಸಿಸಿಬಿ ಆರ್ಥಿಕ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು.
ತಿಮ್ಮೇಗೌಡ ಆತ್ಮಹತ್ಯೆಗೆ ಕಾರಣ ಏನೆಂಬುದು ಇನ್ನೂ ತಿಳಿದು ಬಂದಿಲ್ಲ. ಸದ್ಯ ಬಿಡದಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೆತ್ತಿಕೊಂಡಿದ್ದಾರೆ. ಬಿಡದಿ ಸಮೀಪದಲ್ಲಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ದೇಹ ಪತ್ತೆಯಾಗಿತ್ತು. ಇದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಬಳಿಕ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ ಪೊಲೀಸರಿಗೆ ಮೃತಪಟ್ಟವರು ಸಿಸಿಬಿ ಪೊಲೀಸ್ ಇನ್ಸ್ಪೆಕ್ಟರ್ ಎಂಬುದು ಗೊತ್ತಾಯಿತು.
ತಿಮ್ಮೇಗೌಡ ಸುಮಾರು 20 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಬೆಂಗಳೂರು, ರಾಮನಗರ ಸೇರಿದಂತೆ ರಾಜ್ಯದ ಹಲವು ಕಡೆಗಳಲ್ಲಿ ಕಾರ್ಯನಿರ್ವಹಿಸಿದ್ದರು. ತಿಂಗಳುಗಳ ಹಿಂದಷ್ಟೇ ಅವರು ಸಿಸಿಬಿ ಆರ್ಥಿಕ ವಿಭಾಗಕ್ಕೆ ವರ್ಗಾವಣೆಯಾಗಿದ್ದರು.