

ಬೆಂಗಳೂರು: ವಿಟ್ಲ ಠಾಣಾ ಪೊಲೀಸ್ ನಿರೀಕ್ಷಕರಾದ ನಾಗರಾಜ್ ಹೆಚ್ ಇ ರವರಿಗೆ ಮುಖ್ಯಮಂತ್ರಿ ಚಿನ್ನದ ಪದಕ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ. ಪೊಲೀಸ್ ಇಲಾಖೆಯಲ್ಲಿ ಸಲ್ಲಿಸಿದ ಉತ್ತಮ ಸೇವೆಯನ್ನು ಗುರುತಿಸಿ ಮುಖ್ಯಮಂತ್ರಿ ಚಿನ್ನದ ಪದಕ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ.


2022 ನೇ ಸಾಲಿನ ಮುಖ್ಯಂಂತ್ರಿ ಚಿನ್ನದ ಪದಕ ಪ್ರಶಸ್ತಿಗೆ ನಾಗರಾಜ್ ಹೆಚ್ ಇ ಯವರು ಆಯ್ಕೆಯಾಗಿದ್ದರು. ಆಗ ಬಿಜೆಪಿ ಸರಕಾರ ಆಡಳಿತದಲ್ಲಿತ್ತು. ಇವರ ಮುಖ್ಯಮಂತ್ರಿ ಪದಕ ಪ್ರಶಸ್ತಿ ಘೋಷಣೆಯಾದ ಬಳಿಕ ಸರಕಾರ ಬದಲಾಗಿತ್ತು. ಆ ನಿಟ್ಟಿನಲ್ಲಿ ಪ್ರಶಸ್ತಿ ಪ್ರದಾನ ಬಾಕಿಯಾಗಿತ್ತು.

ಪೊಲೀಸ್ ಧ್ವಜ ದಿನಾಚರಣೆಯಾಗಿರುವ ಇಂದು ದಕ್ಷತೆ, ನಿಷ್ಠೆ ಮತ್ತು ನಿಸ್ವಾರ್ಥ ಮನೋಭಾವದಿಂದ ಸೇವೆ ಸಲ್ಲಿಸಿರುವ ಪೊಲೀಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪುರಸ್ಕಾರಕ್ಕೆ ಆಯ್ಕೆಯಾದ ಪೊಲೀಸ್ ಅಧಿಕಾರಿಗಳಿಗೆ ಪದಕ ನೀಡಿ ಗೌರವಿಸಿದರು.

ವಿಟ್ಲ ಠಾಣೆಯಲ್ಲಿ ಈ ಹಿಂದೆಯೂ ಸಬ್ ಇನ್‌ಸ್ಪೆಕ್ಟರ್ ಆಗಿ ಸೇವೆ ಸಲ್ಲಿಸಿದ ನಾಗರಾಜ್ ಹೆಚ್ ಇ ಯವರು ನಂತರ ಭರ್ತಿಹೊಂದಿ ಬಳಿಕ ಪೊಲೀಸ್ ಇನ್‌ಸ್ಪೆಕ್ಟರ್ ಆಗಿ ವಿಟ್ಲ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
ವಿಟ್ಲದ ನಾಗರಿಕರ ಜೊತೆ ಪ್ರೀತಿ ವಿಶ್ವಾಸ ನಂಬಿಕೆ ಪ್ರಾಮಾಣಿಕತೆಯ ಮೂಲಕ ದಕ್ಷ ಪೊಲೀಸ್ ಅಧಿಕಾರಿಯಾಗಿ ಗುರುತಿಸಕೊಂಡಿರುವ ನಾಗರಾಜ್ ಹೆಚ್ ಇ ರವರು ಜನಸ್ನೇಹಿ ಪೊಲೀಸ್ ಅಧಿಕಾರಿಯಾಗಿ ವಿಟ್ಲದ ಜನರ ಪ್ರೀತಿಗೆ ಪಾತ್ರರಾಗಿದ್ದಾರೆ.