Tuesday, July 28, 2026
spot_imgspot_img
spot_imgspot_img

ಬೆಂಗಳೂರು: ಕೆಲಸ ಕೊಡಿಸೋದಾಗಿ 25 ಕೋಟಿ ವಂಚನೆ – ಜಡ್ಜ್ ಸಹಿಯನ್ನೇ ನಕಲು ಮಾಡಿದ ದಂಪತಿ ಅರೆಸ್ಟ್

- Advertisement -
- Advertisement -

ಬೆಂಗಳೂರು: ಕೋರ್ಟ್‍ನಲ್ಲಿ ಕೆಲಸ ಕೊಡಿಸೋದಾಗಿ ಸುಮಾರು 500ಕ್ಕೂ ಹೆಚ್ಚು ಜನರಿಗೆ ವಂಚಿಸಿದ ದಂಪತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಜೈಸನ್ ಡಿಸೋಜಾ ಮತ್ತು ಲವೀನಾ ಎಂದು ಗುರುತಿಸಲಾಗಿದೆ. ಈ ಜೋಡಿ ನಿರೋದ್ಯೋಗಿಗಳು ಮತ್ತು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡ್ತಿದ್ದ ಅಮಾಯಕರನ್ನು ಟಾರ್ಗೆಟ್ ಮಾಡಿ ವಂಚಿಸುತ್ತಿದ್ದರು. ಕೋರ್ಟ್‍ನಲ್ಲಿ `ಡಿ’ ಗ್ರೂಪ್ ಕೆಲಸ ಕೊಡಿಸೋದಾಗಿ ಒಬ್ಬೊಬ್ಬರಿಂದ 10 ರಿಂದ 25 ಲಕ್ಷ ರೂ. ವರೆಗೆ ಹಣ ಪಡೆದು ವಂಚಿಸಿದ್ದಾರೆ. ಹೀಗೆ ಸುಮಾರು ಐನೂರಕ್ಕೂ ಹೆಚ್ಚು ಜನರಿಂದ 25 ಕೋಟಿ ರೂ.ಗೂ ಹೆಚ್ಚು ಹಣ ಪಡೆದು ವಂಚಿಸಿದ್ದಾರೆ ಎನ್ನಲಾಗಿದೆ.

ನ್ಯಾಯಾಧೀಶರ ಸಹಿಯನ್ನೇ ನಕಲು ಮಾಡಿ ಆರ್ಡರ್ ಪ್ರತಿ ಎಂದು ಅಮಾಯಕರಿಗೆ ಈ ಜೋಡಿ ನಂಬಿಸಿತ್ತು. ಕೆಲಸ ಕೇಳಿದ್ರೆ ನಾಳೆ ನಾಡಿದ್ದು ಎಂದು ಕಥೆ ಹೇಳುತ್ತಿದ್ದರು. ಕೊನೆಗೆ ಫೋನ್ ರಿಸೀವ್ ಮಾಡುತ್ತಲೇ ಇರಲಿಲ್ಲ. ಮೋಸ ಹೋಗಿರೋದು ಗೊತ್ತಾಗಿ ಸಿಸಿಬಿಗೆ ಸಂತ್ರಸ್ಥರು ದೂರು ನೀಡಿದ್ದರು. ಆರೋಪಿಗಳು ವಂಚನೆಗಾಗಿ ಒಂದು ಜಾಲವನ್ನೇ ಸೃಷ್ಟಿಸಿದ್ದರು. ಜನರನ್ನು ನಂಬಿಸಲು, ಹಣ ಪಡೆಯಲು ಏಜೆಂಟ್‍ಗಳನ್ನು ನೇಮಿಸಿಕೊಂಡಿದ್ದರು. ದಾಖಲೆ ಪರಿಶೀಲನೆ ಅಂತ ಖಾಸಗಿ ಹೋಟೆಲ್‍ಗೆ ಕರೆಸಿಕೊಂಡು ಬೇರೆಯವರಿಗೆ ಆಫರ್ ಲೆಟರ್ ಬಂದಿದೆ ಎಂದು ನಕಲಿ ಆಫರ್ ಲೆಟರ್ ತೋರಿಸಿ ವಂಚಿಸುತ್ತಿದ್ದರು. ಇಬ್ಬರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.

- Advertisement -

Related news

error: Content is protected !!