- Advertisement -
- Advertisement -



ಬೆಂಗಳೂರು: ಯಲಹಂಕದಲ್ಲಿ ಅನಿಲ ಸೋರಿಕೆಯಿಂದ ಸಿಲಿಂಡರ್ ಸ್ಫೋಟಗೊಂಡಿರುವ ಘಟನೆ ನಡೆದಿದ್ದು, ಬಾಗೇಪಲ್ಲಿ ಮೂಲದ ದಂಪತಿಗಳಿಬ್ಬರು ಗಾಯಗೊಂಡಿದ್ದಾರೆ ಎನ್ನಲಾಗಿದೆ.
ಕೃಷ್ಣಮ್ಮ-ರಾಜು ಗಾಯಗೊಂಡ ಪತಿ ಪತ್ನಿ. ಇಂದು ಬೆಳಗ್ಗೆ 6 ಗಂಟೆ ಸುಮಾರಿಗೆ ಯಲಹಂಕದ ಚೌಡೇಶ್ವರಿ ಲೇಔಟ್‌ನ ಮನೆಯೊಂದರಲ್ಲಿ ಅನಿಲ ಸೋರಿಕೆಯಿಂದ ಸಿಲಿಂಡರ್ ಸ್ಫೋಟಗೊಂಡಿದ್ದು, ಸ್ಫೋಟ ಹೇಗಾಯಿತು ಎನ್ನುವ ಬಗ್ಗೆ ಸ್ಪಷ್ಟತೆ ತಿಳಿದಿಲ್ಲ, ಆದರೆ ಬೆಳಗ್ಗೆ ಗ್ಯಾಸ್ ಹಚ್ಚುವಾಗ ಅಥವಾ ಲೈಟರ್ ಆನ್ ಮಾಡಿದಾಗ ಗ್ಯಾಸ್ ಸ್ಪೋಟ ಸಂಭವಿಸಿರಬಹುದು ಎಂದು ಸ್ಥಳೀಯರು ಹೇಳುತ್ತಿದ್ದರು ಎನ್ನಲಾಗಿದೆ.
ಸ್ಪೋಟದ ತೀವ್ರತೆಗೆ ಮನೆಗೋಡೆಯ ಒಂದು ಭಾಗವೇ ಛಿದ್ರವಾಗಿದೆ. ಬಳಿಕ ಘಟನೆಯಲ್ಲಿ ಗಾಯಗೊಂಡಿದ್ದ ಕೃಷ್ಣಮ್ಮ-ರಾಜು ದಂಪತಿಯನ್ನ ಸ್ಥಳೀಯರು ಆಸ್ಪತ್ರೆಗೆ ಸೇರಿಸಿದ್ದಾರೆ. ಸ್ಥಳಕ್ಕೆ ಯಲಹಂಕ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.
- Advertisement -








