Sunday, October 18, 2026
spot_imgspot_img
spot_imgspot_img

ಬೆಂಗಳೂರು: ಡೀಸೆಲ್ ಟ್ಯಾಂಕರ್‌ಗೆ ಬೆಂಕಿ, ವಾಹನ ಸವಾರರ ಪರದಾಟ

- Advertisement -
- Advertisement -

ಬೆಂಗಳೂರು: ಬೆಂಗಳೂರಿನ ನೈಸ್ ರಸ್ತೆಯ ಕನಕಪುರ ರಸ್ತೆ ವ್ಯಾಪ್ತಿಯಲ್ಲಿ ಡೀಸೆಲ್ ಟ್ಯಾಂಕರ್‌ವೊಂದು ಬೆಂಕಿಗಾಹುತಿಯಾಗಿದ್ದು, ಭಾರೀ ಆತಂಕ ಸೃಷ್ಟಿಸಿದೆ. ಟ್ಯಾಂಕರ್‌ನಿಂದ ಎತ್ತರಕ್ಕೆ ಬೆಂಕಿಯ ಜ್ವಾಲೆಗಳು ಚಿಮ್ಮುತ್ತಿದ್ದು, ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸಪಡುತ್ತಿದ್ದಾರೆ.

ಕನಕಪುರ ರಸ್ತೆ ಟೋಲ್‌ನಿಂದ ಅಂಜನಾಪುರದ ಕಡೆಗೆ ಬರುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಮಾಹಿತಿ ತಿಳಿಯುತ್ತಿದ್ದಂತೆ ತಲಘಟ್ಟಪುರ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ಆರಂಭಿಸಿದ್ದಾರೆ. ಆದರೆ, ಬೆಂಕಿ ನಿಯಂತ್ರಣಕ್ಕೆ ತರಲು ಸಿಬ್ಬಂದಿ ಪ್ರಯತ್ನಿಸುತ್ತಿದ್ದಾರೆ. ಕಳೆದ ಒಂದೂವರೆ ಗಂಟೆಯಿಂದ ಟ್ಯಾಂಕರ್ ಹೊತ್ತಿ ಉರಿಯುತ್ತಿರುವ ಹಿನ್ನೆಲೆಯಲ್ಲಿ ನೈಸ್ ರಸ್ತೆಯಲ್ಲಿ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿದೆ. ಘಟನೆಯಿಂದಾಗಿ ಸುಮಾರು ನಾಲ್ಕು ಕಿಲೋಮೀಟರ್‌ವರೆಗೆ ವಾಹನಗಳು ಸಾಲುಗಟ್ಟಿ ನಿಂತಿವೆ.

ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣ ಬೆಳೆಸಿದ್ದ ವಾಹನ ಸವಾರರು ಟ್ರಾಫಿಕ್ ಜಾಮ್‌ನಿಂದಾಗಿ ಪರದಾಡುವಂತಾಗಿದೆ. ಬೆಂಕಿ ನಂದಿಸುವ ಕಾರ್ಯಾಚರಣೆ ಹಾಗೂ ಸಂಚಾರ ದಟ್ಟಣೆಯನ್ನು ನಿಯಂತ್ರಿಸಲು ಪೊಲೀಸರು ಕ್ರಮ ಕೈಗೊಳ್ಳುತ್ತಿದ್ದಾರೆ. ಟ್ಯಾಂಕರ್‌ಗೆ ಬೆಂಕಿ ಹೊತ್ತಿಕೊಳ್ಳಲು ನಿಖರ ಕಾರಣವೇನು ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ. ಘಟನೆಯಿಂದ ಸಂಭವಿಸಿರುವ ಹಾನಿ ಹಾಗೂ ಯಾವುದೇ ಪ್ರಾಣಾಪಾಯ ಉಂಟಾಗಿದೆಯೇ ಎಂಬ ಬಗ್ಗೆಯೂ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

- Advertisement -

Related news

error: Content is protected !!