Wednesday, July 22, 2026
spot_imgspot_img
spot_imgspot_img

ಬೆಂಗಳೂರು: ಶಾರ್ಟ್ ಸರ್ಕ್ಯೂಟ್‌ನಿಂದ ಶೋರೂಂಗೆ ಬೆಂಕಿ; ಎಲೆಕ್ಟ್ರಿಕ್ ಬೈಕ್ ಸುಟ್ಟು ಭಸ್ಮ

- Advertisement -
- Advertisement -

ಬೆಂಗಳೂರು: ಕೆ.ಆರ್ ಪುರದ ಟಿ.ಸಿ ಪಾಳ್ಯ ಸಿಗ್ನಲ್ ಬಳಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಶೋರೂಂಗೆ ಬೆಂಕಿ ಹೊತ್ತಿಕೊಂಡು 13 ಎಲೆಕ್ಟ್ರಿಕ್ ಬೈಕ್ ಸುಟ್ಟು ಭಸ್ಮವಾಗಿರುವ ಘಟನೆ ನಡೆದಿದೆ.

ಬುಧವಾರ (ಜ.21) ರಾತ್ರಿ 9:30ರ ಸುಮಾರಿಗೆ ಈ ಅವಘಡ ಸಂಭವಿಸಿದ್ದು, ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆಯೇ ಶೋರೂಂ ಸಿಬ್ಬಂದಿ ಹೊರಬಂದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬೆಂಕಿ ಕೆನ್ನಾಲಿಗೆಗೆ ಸಿಲುಕಿ ಶೋರೂಂನಲ್ಲಿದ್ದ 13 ಎಲೆಕ್ಟ್ರಿಕ್ ಬೈಕ್‌ಗಳು ಸುಟ್ಟು ಕರಕಲಾಗಿವೆ.

ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಕೂಡಲೇ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಸಂಪೂರ್ಣವಾಗಿ ಬೆಂಕಿ ನಂದಿಸಿದ್ದಾರೆ. ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!