- Advertisement -
- Advertisement -



ಬೆಂಗಳೂರು:ವಿಧಾನಸೌಧದಲ್ಲೇ ಕಳ್ಳತನ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರ ಕಚೇರಿಯಲ್ಲಿ 300 ಗ್ರಾಂ ಚಿನ್ನಾಭರಣ ಹಾಗೂ ₹1.50 ಲಕ್ಷ ನಗದು ಇದ್ದ ಕೈಚೀಲ ಕಳವಾಗಿರುವುದು ವರದಿಯಾಗಿದೆ.
ನವೀನ್ ಎಂಬವರು ಕೆಲಸದ ನಿಮಿತ್ತ ಸಚಿವರ ಕಚೇರಿಗೆ ಬಂದ ಸಂದರ್ಭದಲ್ಲಿ ಕೈಚೀಲವನ್ನು ಅಲ್ಲೇ ಮರೆತು ಹೋಗಿದ್ದರು. ಮುಂದಿನ ದಿನ ಕಚೇರಿಗೆ ಬಂದು ನೋಡಿದಾಗ ಕೈಚೀಲ ನಾಪತ್ತೆಯಾಗಿತ್ತು. ತಕ್ಷಣ ಅವರು ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದರು.ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕಚೇರಿಯ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದ ವೇಳೆ, ಡಿಪಿಎಆರ್ ಇಲಾಖೆಯ ಡಿ ಗ್ರೂಪ್ ನೌಕರನೊಬ್ಬ ಕೈಚೀಲವನ್ನು ತೆಗೆದುಕೊಂಡು ಹೋಗಿರುವುದು ಪತ್ತೆಯಾಗಿದೆ. ಬಳಿಕ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ಮುಂದುವರಿದಿದೆ ಎಂದು ವರದಿ ಮೂಲಕ ತಿಳಿದು ಬಂದಿದೆ.
- Advertisement -








