Saturday, November 21, 2026
spot_imgspot_img
spot_imgspot_img

ಬೆಂಗಳೂರು: ಊಟದಲ್ಲಿ ರಾಶಿ ರಾಶಿ ಹುಳುಗಳು – ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಘಟನೆ

- Advertisement -
- Advertisement -

ಆನೇಕಲ್: ಊಟದಲ್ಲಿ ರಾಶಿ ರಾಶಿ ಹುಳುಗಳು ಪತ್ತೆಯಾಗಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ತೆಲಗರಹಳ್ಳಿ ಬಳಿಯ ವಸತಿ ಶಾಲೆಯಲ್ಲಿ ನಡೆದಿದೆ.

ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಮಕ್ಕಳು ಊಟ ಮಾಡುತ್ತಿದ್ದಾಗ ಹುಳಗಳು ಕಾಣಿಸಿಕೊಂಡಿದ್ದು, ವಿದ್ಯಾರ್ಥಿಗಳು ಹೌಹಾರಿದ್ದಾರೆ. ಇನ್ನೂ ಶಾಲೆಯಲ್ಲಿ ಕಳೆದೆರಡು ದಿನಗಳಿಂದ ಕುಡಿಯಲು ನೀರು ಸಹ ಇಲ್ಲ. ಇದರ ಬೆನ್ನಲ್ಲೇ ಊಟದ ಗುಣಮಟ್ಟದ ಬಗ್ಗೆ ವಿದ್ಯಾರ್ಥಿಗಳು ಆಕ್ರೋಶ ಹೊರಹಾಕಿದ್ದಾರೆ.

ಹಾಸ್ಟೆಲ್‌ನಲ್ಲಿ 200ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದು, ಬಡ ವಿಧ್ಯಾರ್ಥಿಗಳ ಜೀವದ ಜೊತೆ ಚೆಲ್ಲಾಟ ಆಡುತ್ತಿದ್ದಾರೆ. ಶಿಕ್ಷಕರು, ಅಡುಗೆ ಸಹಾಯಕರು, ವಾರ್ಡನ್ ಕಳಪೆ ಆಹಾರ ನೀಡುತ್ತಿದ್ದಾರೆ ಎಂದು ವಿಧ್ಯಾರ್ಥಿಗಳು ರೋಸಿ ಹೋಗಿ ಪ್ರತಿಭಟನೆ ನಡೆಸಿದ್ದಾರೆ.

ವಿಧ್ಯಾರ್ಥಿಗಳ ಪ್ರತಿಭಟನೆಗೆ ವಕೀಲರು ಸಾಥ್ ನೀಡಿದ್ದಾರೆ.

- Advertisement -

Related news

error: Content is protected !!