Monday, July 20, 2026
spot_imgspot_img
spot_imgspot_img

ಬೆಂಗಳೂರು: ವೈಯರ್‌ನಿಂದ ಕತ್ತು ಬಿಗಿದು ಲಿವ್ ಇನ್ ಗೆಳತಿಯ ಹತ್ಯೆ – ವಿವಾಹಿತ ಬಂಧನ

- Advertisement -
- Advertisement -

ಬೆಂಗಳೂರು: ವೈಯರ್‌ನಿಂದ ಕತ್ತು ಬಿಗಿದು ಲಿವ್ ಇನ್‌ ಗೆಳತಿಯನ್ನು ವಿವಾಹಿತ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ವರ್ತೂರಿನಲ್ಲಿ ನಡೆದಿದೆ.ಕೊಡಗು ಮೂಲದ ರಂಜಿತಾಳನ್ನು (23) ಆರೋಪಿ ಅಯ್ಯಪ್ಪ ಕೊಲೆ ಮಾಡಿದ್ದಾನೆ. ಇಬ್ಬರು ಲಿವ್‌ ಇನ್‌ ರಿಲೇಶನ್ಶಿಪ್‌ನಲ್ಲಿದ್ದರು ಎಂದು ತಿಳಿದುಬಂದಿದೆ.

ಆರೋಪಿ ಅಯ್ಯಪ್ಪನಿಗೆ ಈ ಮೊದಲೇ ಮದುವೆಯಾಗಿತ್ತು. ಆದರೆ ಮದುವೆಯಾಗಿರುವ ವಿಷಯ ಯುವತಿಗೆ ತಿಳಿದಿರಲಿಲ್ಲ. ಇದೀಗ ಈ ವಿಚಾರ ತಿಳಿದು ಇಬ್ಬರ ಮಧ್ಯೆ ಗಲಾಟೆ ಶುರುವಾಗಿತ್ತು. ಗಲಾಟೆ ತಾರಕಕ್ಕೇರಿ ಆರೋಪಿ ವೈಯರ್‌ನಿಂದ ಯುವತಿಯ ಕತ್ತು ಬಿಗಿದು ಕೊಲೆ ಮಾಡಿದ್ದಾನೆ. ಸದ್ಯ ಈ ಸಂಬಂಧ ವರ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಿದ್ದಾರೆ ಎಂದು ವರದಿ ಮೂಲಕ ತಿಳಿದಿದೆ.

- Advertisement -

Related news

error: Content is protected !!