- Advertisement -
- Advertisement -
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಮತ್ತೆ ಲಾಕ್ ಡೌನ್ ಜಾರಿ ಮಾಡಲಾಗಿದೆ. ಜುಲೈ.14 ರಾತ್ರಿ 8ಗಂಟೆಯಿಂದ ಜುಲೈ 23ರ ಬೆಳಿಗ್ಗೆ 5ಗಂಟೆವರೆಗೆ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಸಂಪೂರ್ಣ ಲಾಕ್ ಡೌನ್ ಆಗಲಿದೆ.
ಏನಿರುತ್ತೆ..? ಏನಿರಲ್ಲ..?
ಅಗತ್ಯ ಸೇವೆಗಳನ್ನು ಹೊರತುಪಡಿಸಿ ಉಳಿದೆಲ್ಲಾ ಸೇವೆಗಳು ಬಂದ್ ಆಗಲಿದೆ. ದಿನಸಿ, ಹಣ್ಣು, ತರಕಾರಿ, ಮೆಡಿಕಲ್ ಮೊದಲಾದ ಅಗತ್ಯ ಸೇವೆಗಳು ಲಭ್ಯವಾಗಲಿದೆ. ಈಗಾಗಲೇ ನಿಗದಿಯಾಗಿರುವ ವೈದ್ಯಕೀಯ ಪದವಿ ಮತ್ತು ಸ್ನಾತಕೋತ್ತರ ಪರೀಕ್ಷೆಗಳು ಎಂದಿನಂತೆ ನಡೆಯಲಿವೆ ಎಂದು ಸರ್ಕಾರದ ಮೂಲಗಳಿಂದ ಮಾಹಿತಿ ಲಭಿಸಿದೆ.
ಆಟೋ, ಟ್ಯಾಕ್ಸಿ, ಬಸ್, ವೈನ್, ಬಾರ್ ಆ್ಯಂಡ್ ರೆಸ್ಟೋರೆಂಟ್ ಸಂಪೂರ್ಣ ಬಂದ್ ಆಗಲಿದೆ. ಇನ್ನು ಲಾಕ್ ಡೌನ್ ಕುರಿತು ಸೋಮವಾರ ಮಾರ್ಗಸೂಚಿ ಬಿಡುಗಡೆಯಾಗಲಿದೆ ಎಂದು ಟ್ವಿಟ್ಟರ್ ನಲ್ಲಿ ಸಿಎಂ ಬಿ.ಎಸ್ ಯಡಿಯೂರಪ್ಪ ಮಾಹಿತಿ ಕೊಟ್ಟಿದ್ದಾರೆ.
- Advertisement -