Sunday, September 13, 2026
spot_imgspot_img
spot_imgspot_img

ಬೆಂಗಳೂರು: ಮಂಗಳೂರು ಮೂಲದ ಟೆಕ್ಕಿ ಆತ್ಮಹತ್ಯೆ!

- Advertisement -
- Advertisement -

ಬೆಂಗಳೂರು: ಮಂಗಳೂರು ಮೂಲದ ಟೆಕ್ಕಿಯೊಬ್ಬರು ಬೆಂಗಳೂರಿನ ಅಪಾರ್ಟ್‌ಮೆಂಟ್‌ ಕಟ್ಟಡವೊಂದರ 16ನೇ ಫ್ಲೋರ್‌ನಿಂದ ಬಿದ್ದು, ಸಾವನ್ನಪ್ಪಿರುವ ಘಟನೆ ನಡೆದಿದ್ದು, ಮೃತರನ್ನು ಮಂಗಳೂರು ಮೂಲದ ಸಾಫ್ಟ್ವೇರ್ ಇಂಜಿನಿಯರ್ ನಿಕ್ಷೇಪ್ ಬಂಗೇರ(26) ಎಂದು ಗುರುತಿಸಲಾಗಿದೆ.

ನಿಕ್ಷೇಪ್ ಅವರು ವಿದೇಶದಲ್ಲಿ ಇಂಜಿನಿಯರಿಂಗ್ ಶಿಕ್ಷಣ ಮುಗಿಸಿ ನಂತರ ಬೆಂಗಳೂರಿನಲ್ಲಿ ಉದ್ಯೋಗಕ್ಕೆ ಸೇರಿದ್ದರು. ನಗರಕ್ಕೆ ಬಂದಾಗಿನಿಂದ ಅವರು ಬಗಲಗುಂಟೆಯ ಅಪಾರ್ಟ್‌ಮೆಂಟ್‌ವೊಂದರಲ್ಲಿ ವಾಸವಿದ್ದು, ವರ್ಕ್ ಫ್ರಂ ಹೋಮ್ ಕೆಲಸ ಮಾಡುತ್ತಿದ್ದರು. ಆರೋಗ್ಯ ಸಂಬಂಧಿತ ಸಮಸ್ಯೆಗಳಿಂದಾಗಿ ಅವರು ಮಾನಸಿಕ ಖಿನ್ನತೆಗೂ ಜಾರಿದ್ದರು ಎಂದು ಮೂಲಗಳಿಂದ ತಿಳಿದುಬಂದಿದೆ. ಅವರು ವಾಸವಿದ್ದ ಬಗಲಗುಂಟೆಯ ಖಾಸಗಿ ಅಪಾರ್ಟ್ಮೆಂಟ್‌ನಲ್ಲಿ 20ನೇ ಮಹಡಿಯ ಫ್ಲಾಟ್‌ನಲ್ಲಿ ವಾಸವಾಗಿದ್ದರು. ಆದರೆ ಬುಧವಾರ ಬೆಳಿಗ್ಗೆ 16ನೇ ಮಹಡಿಯಿಂದ ಕೆಳಕ್ಕೆ ಜಿಗಿದಿದ್ದಾರೆ ಎಂದು ವರದಿಯಾಗಿದೆ.

ಈ ಸಂಬಂಧ ಬಗಲಗುಂಟೆಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮರಣೋತ್ತರ ಪರೀಕ್ಷೆಯ ನಂತರ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

Related news

error: Content is protected !!