Saturday, July 25, 2026
spot_imgspot_img
spot_imgspot_img

ಬೆಂಗಳೂರು: ಭೀಕರ ಅಗ್ನಿ ಅವಘಡ – 50ಕ್ಕೂ ಹೆಚ್ಚು ಮಹಿಳೆಯರ ರಕ್ಷಣೆ

- Advertisement -
- Advertisement -

ಬೆಂಗಳೂರು: ನಗರದ ನಂದಿನಿ ಲೇಔಟ್‌ನಲ್ಲಿ ರಾಜಕುಮಾರ್ ಸ್ಮಾರಕದ ಸಮೀಪದಲ್ಲಿರುವ ಬ್ಲೂ ಲೀಫ್ ಎಲ್‌ಇಡಿ ಗೋಡೌನ್‌ನಲ್ಲಿ ಮಧ್ಯರಾತ್ರಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಬ್ಯಾನರ್‌ಗಳು ಮತ್ತು ಎಲ್‌ಇಡಿ ಸ್ಕ್ರೀನ್‌ಗಳನ್ನು ಸಂಗ್ರಹಿಸಿ ವಿತರಿಸುತ್ತಿದ್ದ ಈ ಗೋಡೌನ್ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದ್ದು, ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿರಬಹುದೆಂದು ಪ್ರಾಥಮಿಕವಾಗಿ ಶಂಕಿಸಲಾಗಿದೆ.

ಅಗ್ನಿ ಅವಘಡದ ವೇಳೆ ಗೋಡೌನ್ ಮುಂಭಾಗ ನಿಲ್ಲಿಸಿದ್ದ ಬುಲೆಟ್ ಬೈಕ್ ಹಾಗೂ ಬೊಲೆರೊ ಪಿಕಪ್ ವಾಹನಗಳು ಕೂಡ ಸಂಪೂರ್ಣವಾಗಿ ಸುಟ್ಟು ಹೋಗಿವೆ. ಸ್ಥಳಕ್ಕೆ ತಕ್ಷಣ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟರು. ಬೆಂಕಿಯ ತೀವ್ರತೆ ಹೆಚ್ಚಾಗಿ ಪಕ್ಕದಲ್ಲಿದ್ದ ನಾಲ್ಕು ಅಂತಸ್ತಿನ ಲೇಡಿಸ್ ಪಿಜಿ ಕಟ್ಟಡ ಹಾಗೂ ಸುತ್ತಮುತ್ತಲಿನ ಮನೆಗಳಿಗೂ ವ್ಯಾಪಿಸಿದೆ. ಈ ಘಟನೆಯಿಂದ ಕಟ್ಟಡಗಳಿಗೆ ಭಾರೀ ಹಾನಿ ಸಂಭವಿಸಿದ್ದು, ಗೋಡೆಗಳಲ್ಲಿ ಬಿರುಕುಗಳು ಹಾಗೂ ಕಿಟಕಿ ಗಾಜುಗಳು ಪುಡಿ ಪುಡಿಯಾಗಿರುವುದು ಕಂಡುಬಂದಿದೆ.

ಪಿಜಿಯಲ್ಲಿ ವಾಸವಿದ್ದ ಸುಮಾರು 50 ಮಹಿಳೆಯರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದ್ದು, ಭಾರೀ ಅನಾಹುತ ತಪ್ಪಿಸಲಾಗಿದೆ ಎಂದು ವರದಿ ಮೂಲಕ ತಿಳಿದು ಬಂದಿದೆ.

- Advertisement -

Related news

error: Content is protected !!