Saturday, July 25, 2026
spot_imgspot_img
spot_imgspot_img

ಬೆಂಗಳೂರು: ಮೋಸ್ಟ್‌ ವಾಂಟೆಡ್‌ ಶಂಕಿತ ಉಗ್ರ ಬಂಧನ!

- Advertisement -
- Advertisement -

ಬೆಂಗಳೂರು: 2023ರ ಗ್ರೆನೇಡ್‌ ಪತ್ತೆ ಕೇಸ್‌ನಲ್ಲಿ ಮೋಸ್ಟ್‌ ವಾಂಟೆಡ್‌ ಶಂಕಿತ ಉಗ್ರನನ್ನು ಎನ್‌ಐಎ ಪೊಲೀಸರು ಬಂಧಿಸಿದ್ದಾರೆ.
ಶಂಕಿತ ಉಗ್ರ ಅರ್ಷದ್‌ ಖಾನ್‌ ಬಂಧಿತ. ಮೋಸ್ಟ್ ವಾಂಟೆಡ್ ಶಂಕಿತ ಉಗ್ರನ ಖಾಸ ದೋಸ್ತ್ ಈತ. ಬೇಲ್ ಪಡೆದು ತಲೆಮರೆಸಿಕೊಂಡಿದ್ದ. ಈಗ ಮತ್ತೆ ಆರ್‌.ಟಿ ನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಬಂಧನಕ್ಕೆ ಒಳಗಾಗಿದ್ದಾನೆ.

ಸಿಸಿಬಿ ಅಧಿಕಾರಿಗಳು ನಡೆಸಿದ್ದ ಕಾರ್ಯಾಚರಣೆಯಲ್ಲಿ ಈ ಹಿಂದೆ ಅರ್ಷದ್‌ ಖಾನ್‌ ಅರೆಸ್ಟ್‌ ಆಗಿದ್ದ, ಶಂಕೆ ಮೇರೆಗೆ ಸಿಸಿಬಿ ಬಂಧಿಸಿತ್ತು. ನಂತರ ಜಾಮೀನಿನ ಮೇಲೆ ಹೊರಗಿದ್ದ. ಬಳಿಕ ಪ್ರಕರಣ ಎನ್‌ಐಎಗೆ ವರ್ಗಾವಣೆಯಾಗಿತ್ತು. ಜಾಮೀನು ಸಿಕ್ಕಿದ ಮೇಲೆ ಕೋರ್ಟ್‌ಗೆ ಹಾಜರಾಗಿರಲಿಲ್ಲ. ಶಂಕಿತನ ಮೇಲೆ ಪ್ರೊಕ್ಲೋಮೇಷನ್ ಜಾರಿಯಾಗಿತ್ತು.ಶಂಕಿತ ಉಗ್ರ ಕುಕ್ಕರ್ ಬಾಂಬ್ ಸ್ಪೋಟದ ರೂವಾರಿ ಜುನೈದ್ ಅಹ್ಮದ್ ಖಾಸಾ ಸ್ನೇಹಿತ. ಜುನೈದ್‌ ವಿದೇಶಗಳಲ್ಲಿ ತಲೆಮರೆಸಿಕೊಂಡಿದ್ದಾನೆ. ಸದ್ಯ ಶಂಕಿತ ಉಗ್ರ ಅರ್ಷದ್‌ನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ವರದಿ ಮೂಲಕ ತಿಳಿದು ಬಂದಿದೆ.

- Advertisement -

Related news

error: Content is protected !!