- Advertisement -
- Advertisement -



ಬೆಂಗಳೂರು: ಯಶವಂತಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಚಲಿಸುತ್ತಿದ್ದ ಕಾರಿಗೆ ರಸ್ತೆ ಮಧ್ಯೆ ಬೆಂಕಿ ಹೊತ್ತಿಕೊಂಡಿರುವ ಘಟನೆ ನಡೆದಿದೆ.
ಇಂದು ಬೆಳಗ್ಗೆ ಸುಮಾರು 7 ಗಂಟೆಗೆ ಯಶವಂತಪುರದಿಂದ ಮಲ್ಲೇಶ್ವರಂ ಕಡೆಗೆ ತೆರಳುತ್ತಿದ್ದ ವೇಳೆ ಕಾರಿನ ಇಂಜಿನ್‌ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣ ಚಾಲಕ ಕಾರಿನಿಂದ ಇಳಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಬೆಂಕಿಯನ್ನು ನಂದಿಸಲು ಪ್ರಯತ್ನಿಸಿದ್ದಾರೆ. ಘಟನೆಯಲ್ಲಿ ಯಾವುದೇ ಜೀವಹಾನಿ ಸಂಭವಿಸಿಲ್ಲ. ಕಾರಿಗೆ ಬೆಂಕಿ ಹೊತ್ತಿಕೊಂಡ ಕಾರಣ ಇನ್ನೂ ತಿಳಿದುಬಂದಿಲ್ಲ.
- Advertisement -








