



ಬೆಂಗಳೂರು: ನಿಗೂಢ ಸ್ಫೋಟವೊಂದು ಸಂಭವಿಸಿದ್ದು, ಬಾಲಕ ಮೃತಪಟ್ಟು ಹತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಸಂಜಯ್ ಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತ ಬಾಲಕನನ್ನು ಮುಬಾರಕ್ (8) ಎಂದು ಗುರುತಿಸಲಾಗಿದೆ.
ತಿಮ್ಮರಾಜು ಎಂಬುವವರ ಮನೆಯಲ್ಲಿ ಸ್ಫೋಟ ಸಂಭವಿಸಿದ್ದು, , ಕಸ್ತೂರಿ, ಸರಸಮ್ಮ, ಶಬೀರನಾ ಬಾನು, ಫಾತಿಮಾ ಸೇರಿದಂತೆ ಹತ್ತು ಮಂದಿಗೆ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.
ಸಿಲಿಂಡರ್‌ನಿಂದ ಅನಿಲ ಸೋರಿಕೆಯಾಗಿ ಸ್ಫೋಟ ಸಂಭವಿಸಿದೆ ಎಂದು ಹೇಳಲಾಗಿದೆ. ಸ್ಫೋಟದ ತೀವ್ರತೆಗೆ ಮೂರು ಮನೆಯ ಗೋಡೆಗೆ ಹಾನಿಯಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಸಿಲಿಂಡರ್‌ನಿಂದ ಅನಿಲ ಸೋರಿಕೆಯಿಂದ ಆಗಿರುವ ಅವಘಡವೇ ಅಥವಾ ಬೇರೆ ಕಾರಣವೇ ಎಂಬುದನ್ನು ಪರಿಶೀಲಿಸಲಾಗುತ್ತಿದೆ. ಸ್ಥಳದಲ್ಲಿ ಯಾವುದಾದರೂ ಸ್ಫೋಟಕವಿತ್ತೇ ಎಂಬುದನ್ನು ಪತ್ತೆ ಮಾಡಲಾಗುತ್ತಿದೆ ಎಂದು ಪೊಲೀಸರು ಹೇಳಿದರು. ಸ್ಥಳಕ್ಕೆ ಹೆಚ್ಚುವರಿ ಕಮಿಷನರ್ ರಮೇಶ್ ಬಾನೋತ್ ಭೇಟಿ, ಪರಿಶೀಲನೆ ನಡೆಸಿದರು.








