- Advertisement -
- Advertisement -





ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಶಾಲೆಗಳಲ್ಲಿ ಮಕ್ಕಳಿಗೆ ನೀರು ಕುಡಿಯಲು ಇನ್ಮುಂದೆ ‘ವಾಟರ್ ಬೆಲ್’ ಎಂಬ ಸಮಯ ನಿಗದಿ ಮಾಡಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಹೊರಡಿಸಿದೆ.
ಮಕ್ಕಳ ಬೆಳವಣಿಗೆಗೆ ಮತ್ತು ಆರೋಗ್ಯಕ್ಕೆ ನೀರು ಅತ್ಯವಶ್ಯಕವಾಗಿದೆ. ಜೊತೆಗೆ ದೇಹದ ಉಷ್ಣತೆಯನ್ನು ನಿಯಂತ್ರಿಸುವುದಲ್ಲದೆ ಆಹಾರವನ್ನು ಜೀರ್ಣಿಸಿಕೊಳ್ಳಲು ಸಹಾಯ ಮಾಡುತ್ತದೆ. ಹೀಗಾಗಿ ರಾಜ್ಯದಲ್ಲಿರುವ ಎಲ್.ಕೆ.ಜಿ, ಯು.ಕೆ.ಜಿ ಒಳಗೊಂಡಂತೆ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ಮಕ್ಕಳಿಗೆ ಆಗಾಗ ನೀರು ಕುಡಿಯುವಂತೆ ಜ್ಞಾಪಿಸಲು ವಾಟರ್ ಬೆಲ್ ಅನುಷ್ಠಾನಗೊಳಿಸಲು ಸೂಚನೆ ನೀಡಿದೆ.
ವಾಟರ್ ಬೆಲ್ ಬಗ್ಗೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಕ್ಷಣ ಇಲಾಖೆಗೆ ಪತ್ರ ಬರೆದು ಮನವಿ ಮಾಡಿ, ಅದರಂತೆ ಆಯೋಗದ ಪತ್ರಕ್ಕೆ ನೀರಿನ ಗಂಟೆ ಬಾರಿಸಲು ಶಿಕ್ಷಣ ಇಲಾಖೆ ”ಪಿಎಂ ಪೋಷಣ್ ಶಕ್ತಿ ನಿರ್ಮಾಣ್” ಸುತ್ತೋಲೆ ಹೊರಡಿಸಿದ್ದು, ವಾಟರ್ ಬೆಲ್ ಹೊಡೆದು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲು ಆದೇಶ ನೀಡಿದೆ.
- Advertisement -








