Sunday, May 5, 2024
spot_imgspot_img
spot_imgspot_img

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣ : ಶಂಕಿತ ಆರೋಪಿಯ ಚಲನವಲನ ಸಿಸಿಟಿವಿಯಲ್ಲಿ ಸೆರೆ

- Advertisement -G L Acharya panikkar
- Advertisement -

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಸಿಸಿಟಿವಿಯಲ್ಲಿ ಶಂಕಿತ ಆರೋಪಿಯ ಚಹರೆ, ಚಲನವಲನ ದೃಶ್ಯ ಸೆರೆಯಾಗಿದೆ. ತಲೆ ಮೇಲೆ ಹ್ಯಾಟ್​​​​ ಹಾಕಿಕೊಂಡಿರುವ ಶಂಕಿತ ವ್ಯಕ್ತಿಯಿಂದ ಬಾಂಬ್ ಇಡಲಾಗಿದೆ ಎಂಬ ಅನುಮಾನ ವ್ಯಕ್ತವಾಗಿದೆ. ಆರೋಪಿ ಹಾಕಿರುವ ಬಿಳಿ ಬಣ್ಣದ ಹ್ಯಾಟ್​​ ಮೇಲೆ ನಂಬರ್ 10 ಎಂದು ನಮೂದಿಸಲಾಗಿದೆ. ಶಂಕಿತ ಆರೋಪಿಯ ಚಲನವಲನ ಸೆರೆಯಾಗಿರುವ ಸಿಸಿಟಿವಿ ಲಭ್ಯವಾಗಿದೆ.

ಆರೋಪಿ ಕಪ್ಪು ಬಣ್ಣದ ಮಾಸ್ಕ್​ ಹಾಕಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆತ ಕಪ್ಪು ಬಣ್ಣದ ಬ್ಯಾಗ್​ ಜೊತೆ ರಾಮೇಶ್ವರಂ ಕೆಫೆ​ಗೆ ಬಂದಿದ್ದ. ಕೆಫೆಯಲ್ಲಿ ತಿಂಡಿಯ ಪ್ಲೇಟ್ ಹಿಡಿದು ಓಡಾಡಿರುವ ದೃಶ್ಯ ಸೆರೆಯಾಗಿದೆ. ಹೋಗುತ್ತಾ ವಾಚ್​ನಲ್ಲಿ ಟೈಂ ನೋಡಿ ಹೋಗಿದ್ದು ಕೆಫೆಯಿಂದ ಹೊರಗೆ ಬಂದು ಎಡಭಾಗಕ್ಕೆ ಹೋಗಿದ್ದಾನೆ. ಆರೋಪಿಗಾಗಿ ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!