Wednesday, July 22, 2026
spot_imgspot_img
spot_imgspot_img

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ, ನಟ ಜೋಸೈಮನ್ ಹೃದಯಾಘಾತದಿಂದ ನಿಧನ

- Advertisement -
- Advertisement -

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ, ನಟ ಜೋಸೈಮನ್(80) ಹೃದಯಾಘಾತದಿಂದ ನಿಧನರಾಗಿದ್ದಾರೆ.
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಕಾರ್ಯಕಾರಿ ಸಮಿತಿಯ ಮಹತ್ವದ ಸಭೆ ನಡೆಯುತ್ತಿತ್ತು. ಈ ಸಭೆಯಲ್ಲಿ ಪಾಲ್ಗೊಂಡಿದ್ದ ಜೋ ಸೈಮನ್ ಸಭೆಯ ಮಧ್ಯೆ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಸಮೀಪದ ಮಲ್ಲಿಗೆ ಆಸ್ಪತ್ರೆಗೆ ದಾಖಲಿಸಲಾಯಿತು, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದರು.

ಮೂಲತಃ ಮಂಡ್ಯದವರಾದ ಜೋಸೈಮನ್ ಚಿತ್ರರಂಗದಲ್ಲಿ ಮೇಕ್ ಅಪ್ ಬಾಯ್ ಆಗಿ ವೃತ್ತಿಜೀವನ ಆರಂಭಿಸಿದರು. ಬಳಿಕ ನಿರ್ದೇಶಕರಾಗಿ ನೂರಕ್ಕೂ ಹೆಚ್ಚು ಚಿತ್ರಗಳಿಗೆ ಆಕ್ಷನ್ ಕಟ್ ಹೇಳಿದ್ದಾರೆ. ಸಾಹಸಸಿಂಹ ವಿಷ್ಣುವರ್ಧನ್ ಅಭಿನಯದ ಸೂಪರ್ ಹಿಟ್ ಚಿತ್ರ ಸಾಹಸಸಿಂಹ, ರವಿವರ್ಮ ಸೇರಿದಂತೆ ಸಿಂಹದ ಜೋಡಿ, ಮಹಾ ಪ್ರಚಂಡರು, ಏಜೆಂಟ್ ಅಮರ್ ನಂತಹ ಸಾಹಸ ಪ್ರಧಾನ ಚಿತ್ರಗಳನ್ನು ಜೋಸೈಮನ್ ನಿರ್ದೇಶಿಸಿದ್ದಾರೆ. ನಿರ್ದೇಶಕನಾಗಿ ಮಾತ್ರವಲ್ಲದೆ, ನಟನಾಗಿ, ಗೀತ ಸಾಹಿತಿಯಾಗಿಯೂ ಜನಪ್ರಿಯರಾಗಿದ್ದರು.

- Advertisement -

Related news

error: Content is protected !!