Monday, October 26, 2026
spot_imgspot_img
spot_imgspot_img

ಬೆಂಗಳೂರು: ಜ್ಯುವೆಲ್ಲರಿ ಶಾಪ್ ನಲ್ಲಿ ಕೋಟ್ಯಂತರ ರೂ.ಮೌಲ್ಯದ ಬೆಳ್ಳಿ ವಸ್ತುಗಳು ಕಳವು..!

- Advertisement -
- Advertisement -

ಬೆಂಗಳೂರು: ದಾಸರಹಳ್ಳಿಯ ಎಂಟನೇ ಮೈಲಿ ಬಳಿಯ ಹಾವನೂರಿನಲ್ಲಿರುವ ಎಂ.ಬಿ ಜ್ಯುವೆಲ್ಲರ್ಸ್ ಮಳಿಗೆಯಲ್ಲಿ ಭೀಕರ ಕಳ್ಳತನ ನಡೆದಿದ್ದು, ಸುಮಾರು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ವಸ್ತುಗಳನ್ನು ಕಳ್ಳರು ದೋಚಿದ್ದಾರೆ.

ಕಳೆದ ಎರಡು ದಿನಗಳ ಹಿಂದೆ ಈ ಘಟನೆ ನಡೆದಿದ್ದು, ಜ್ಯುವೆಲ್ಲರಿ ಶಾಪ್‌ನ ಹಿಂಭಾಗದ ರೂಮ್‌ನ ಬೀಗ ಮುರಿದು ಒಳನುಗ್ಗಿರುವ ಕಳ್ಳರು, ನಂತರ ಗೋಡೆಯನ್ನು ಕೊರೆದು ಮಳಿಗೆಯೊಳಗೆ ಪ್ರವೇಶಿಸಿ ಸುಮಾರು 70 ಕೆಜಿ ಬೆಳ್ಳಿ ವಸ್ತುಗಳ್ಳನ್ನು ಕದ್ದಿದ್ದಾರೆ.

ಕಳ್ಳತನದ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಬಾಗಲಗುಂಟೆ ಪೊಲೀಸರು ಪರಿಶೀಲನೆ ನಡೆಸಿ, ಮಳಿಗೆಯಲ್ಲಿದ್ದ ಸಿಸಿಟಿವಿ ದೃಶ್ಯಾವಳಿಗಳನ್ನು ಹಾಗೂ ಕಳ್ಳರು ಗೋಡೆ ಕೊರೆಯಲು ಬಳಸಿದ ವಿಧಾನಗಳನ್ನು ಪೊಲೀಸರು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಸದ್ಯ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಳ್ಳರಿಗಾಗಿ ತೀವ್ರ ಶೋಧ ಕಾರ್ಯ ಮುಂದುವರಿದಿದೆ ಎಂಬುದಾಗಿ ವರದಿ ಮೂಲಕ ತಿಳಿದುಬಂದಿದೆ.

- Advertisement -

Related news

error: Content is protected !!