Tuesday, July 21, 2026
spot_imgspot_img
spot_imgspot_img

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ…!

- Advertisement -
- Advertisement -

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜ.8 ರಂದು ನಿರಂಜನ್ ಶೆಟ್ಟಿ ಹೆಸರಿನ ಯೂಟ್ಯೂಬ್‌ ಚಾನೆಲ್‌ನಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದು, ಈ ಸಂಬಂಧ ಪದವಿ ಪೂರ್ವ ಇಲಾಖೆಯ ಜಂಟಿ ನಿರ್ದೇಶಕ ರಾಜು ಅವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಉತ್ತರ ವಿಭಾಗದ ಸೈಬರ್ ಸೆನ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು.

ತನಿಖೆಗೆ ಇಳಿದ ಪೊಲೀಸರು ತುಮಕೂರು, ರಾಮನಗರ, ಕಲಬುರಗಿ ಜಿಲ್ಲೆಯ ಹೆಡ್ ಮಾಸ್ಟರ್‌ಗಳು, ಶಿಕ್ಷಕರು ಹಾಗೂ ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳನ್ನು ಸೇರಿ 8 ಮಂದಿಯನ್ನು ಬಂಧಿಸಿದ್ದಾರೆ.
ಪೊಲೀಸರು ಪ್ರಶ್ನೆಪತ್ರಿಕೆಯನ್ನು ವೈರಲ್ ಮಾಡಿದವರ ವಾಟ್ಸಾಪ್‌, ಇನ್‌ಸ್ಟಾಗ್ರಾಂ, ಟೆಲಿಗ್ರಾಂ ಖಾತೆಯ ಜೊತೆ ಮೊಬೈಲ್ ಪರಿಶೀಲನೆ ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಈ ಪ್ರಕರಣದಲ್ಲಿ ಮತ್ತಷ್ಟು ಮಂದಿ ಬಂಧನವಾಗುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ.

- Advertisement -

Related news

error: Content is protected !!