Wednesday, July 22, 2026
spot_imgspot_img
spot_imgspot_img

ಬೆಂಗಳೂರು: ಡಿಜಿಪಿ ಕೆ.ರಾಮಚಂದ್ರ ರಾವ್ ಅಮಾನತು ರದ್ದು: ಸರಕಾರ ಆದೇಶ

- Advertisement -
- Advertisement -

ಬೆಂಗಳೂರು: ಮಹಿಳೆಯರೊಂದಿಗಿನ ರಾಸಲೀಲೆ ವೀಡಿಯೊ ವೈರಲ್ ಆದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಿರಿಯ ಐಪಿಎಸ್ ಅಧಿಕಾರಿ ಡಾ.ಕೆ.ರಾಮಚಂದ್ರ ರಾವ್ ಅವರನ್ನು ಅಮಾನತುಗೊಳಿಸಿ ಹೊರಡಿಸಿದ್ದ ಆದೇಶವನ್ನು ರದ್ದುಪಡಿಸಲಾಗಿದ್ದು, ತಕ್ಷಣದಿಂದಲೇ ಜಾರಿಗೆ ಬರುವಂತೆ ಅವರನ್ನು ಮರು ನೇಮಕ ಮಾಡಲಾಗಿದೆ.

ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿಯಾಗಿದ್ದ ರಾಮಚಂದ್ರರಾವ್ ತಮ್ಮ ಕಚೇರಿಯಲ್ಲಿ ಪೊಲೀಸ್ ಸಮವಸ್ತ್ರದಲ್ಲಿ ಇರುವಾಗಲೇ ಮಹಿಳೆಯರ ಜೊತೆ ಅಶ್ಲೀಲ ವರ್ತನೆಯಲ್ಲಿ ತೊಡಗಿದ್ದಾರೆ ಎನ್ನಲಾದ ವೀಡಿಯೊ ಜ.19ರಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದ ಸರಕಾರವು, ಅಂದು ರಾತ್ರಿಯೇ ರಾಮಚಂದ್ರರಾವ್ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿತ್ತು.

ಇದೀಗ, ರಾಮಚಂದ್ರ ರಾವ್ ಅಮಾನತು ಆದೇಶ ಹಿಂಪಡೆದಿರುವ ಸರಕಾರ, ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಪೊಲೀಸ್‌ ಮಹಾ ನಿರ್ದೇಶಕ(ಪೊಲೀಸ್‌ ಕೈಪಿಡಿ) ಹುದ್ದೆಗೆ ನೇಮಕ ಮಾಡಲಾಗಿದೆ ಎಂದು ವರದಿ ಮೂಲಕ ತಿಳಿದುಬಂದಿದೆ.

- Advertisement -

Related news

error: Content is protected !!