- Advertisement -
- Advertisement -





ಬೆಂಗಳೂರು: ಕನ್ನಡದ ಖ್ಯಾತ ಲೇಖಕಿ, ಕಾದಂಬರಿಕಾರ್ತಿ, ಪ್ರಕಾಶಕಿ ಹಾಗೂ ಕಲಾವಿದೆ ಆಶಾ ರಘು (47) ಅವರು ನಿಧನರಾಗಿದ್ದಾರೆ. ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ತಮ್ಮ ನಿವಾಸದಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಅವರ ಪತಿ, ಖ್ಯಾತ ಆಹಾರ ತಜ್ಞ ಹಾಗೂ ಲೇಖಕ ಕೆ.ಸಿ.ರಘು ಅವರು ಎರಡು ವರ್ಷಗಳ ಹಿಂದೆ ನಿಧನರಾಗಿದ್ದು, ಪತಿಯ ಅಗಲಿಕೆಯ ನಂತರ ಮಾನಸಿಕವಾಗಿ ನೊಂದಿದ್ದರು ಎನ್ನಲಾಗಿದೆ. ಆಶಾ ಅವರಿಗೆ ಒಬ್ಬ ಪುತ್ರಿಯೂ ಇದ್ದಾರೆ.
ನಿನ್ನೆ ರಾತ್ರಿ ಮನೆಯ ಕೊಠಡಿಯಲ್ಲಿ ಅವರು ಆತ್ಮಹತ್ಯೆಗೆ ಯತ್ನಿಸಿದ್ದು, ವಿಷಯ ತಿಳಿದ ತಕ್ಷಣ ಕುಟುಂಬಸ್ಥರು ಬಾಗಿಲು ಒಡೆದು ರಕ್ಷಿಸಲು ಪ್ರಯತ್ನಿಸುವಷ್ಟರಲ್ಲಿ ಅವರು ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಲಾಗಿದ್ದು, ಇಂದು ಸಂಜೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
- Advertisement -








