Thursday, June 18, 2026
spot_imgspot_img
spot_imgspot_img

ಅನುಕಂಪದ ಆಧಾರದ ಕೆಲಸಕ್ಕೆ ಶಿಫಾರಸ್ಸು, ಲಂಚ ಸಮೇತ ಲೋಕಾಯುಕ್ತ ಬಲೆಗೆ ಬಿದ್ದ ಬಿಇಓ

- Advertisement -
- Advertisement -

ಚಿಕ್ಕಮಗಳೂರು: ಅನುಕಂಪದ ಆಧಾರದ ಕೆಲಸಕ್ಕೆ ನೌಕರರಿಗೆ ಶಿಫಾರಸ್ಸು ಮಾಡಲು ಲಂಚ ಪಡೆಯುವಾಗ ರೆಡ್ ಹ್ಯಾಂಡಾಗಿ ಬಿಇಓ ಲೋಕಾಯುಕ್ತ ಬಲೆಗೆ ಸಿಕ್ಕಿ ಬಿದ್ದ ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯ ಬಿಇಓ ಹೇಮಂತ್ ರಾಜ್ ಅನುಕಂಪದ ನೌಕರಿಗೆ ಶಿಫಾರಸ್ಸು ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

ಚಿಕ್ಕಮಗಳೂರು ತಾಲೂಕಿನ ಹಳ್ಳಿಯೊಂದರ ಮಹಿಳೆಯ ಪತಿ ಮೂಡಿಗೆರೆ ತಾಲೂಕಿನ ಹೊಯ್ಸಳಲು ಗ್ರಾಮದ ಶಾಲೆಯಲ್ಲಿ ಸಹ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದರು. 2023ರ ಮೇ 5 ರಂದು ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದರು. ಹಾಗಾಗಿ, ಶಿಕ್ಷಕರ ಪತ್ನಿ ಅನುಕಂಪದ ಆಧಾರದ ನೌಕರಿಗೆ ಶಿಫಾರಸ್ಸು ಮಾಡುವಂತೆ ಬಿಇಓಗೆ ಮನವಿ ಮಾಡಿದ್ದರು. ಅವರು ದಾಖಲೆ ಕೇಳುವ ನೆಪದಲ್ಲಿ ದಿನದೂಡುತ್ತಿದ್ದರು. ಮಹಿಳೆ ಬಿಇಓ ಕಚೇರಿಯ ಎಸ್.ಡಿ.ಎ. ಬಳಿ ಕೇಳಿದಾಗ 15000 ಸಾವಿರಕ್ಕೆ ಬೇಡಿಕೆ ಇಟ್ಟಿದ್ದರು.

ಮಹಿಳೆ ಬಿಇಓ ಬಳಿ ಮನವಿ ಮಾಡಿದಾಗ ಬಿಇಓ ಹೇಮಂತ್ ರಾಜ್ 15000 ದಿಂದ 10 ಸಾವಿರಕ್ಕೆ ಬಂದಿದ್ದರು. 10 ಸಾವಿರ ಹಣ ಪಡೆದುಕೊಳ್ಳುವಾಗ ಬಿಇಓ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ. ಲೋಕಾಯುಕ್ತ ಇನ್ಸ್ ಪೆಕ್ಟರ್ ಅನಿಲ್ ರಾಥೋಡ್ ನೇತೃತ್ವದ ತಂಡ ಹೇಮಂತ್ ರಾಜ್ ಅವರನ್ನ ಬಂಧಿಸಿದೆ.

- Advertisement -

Related news

error: Content is protected !!