Monday, April 29, 2024
spot_imgspot_img
spot_imgspot_img

ಶಾಲೆಗಳಲ್ಲಿ ಭಗವದ್ಗೀತೆ ಬೋಧನೆ; ಗುಜರಾತ್​ ಸರ್ಕಾರ ಆದೇಶ

- Advertisement -G L Acharya panikkar
- Advertisement -

ನವದೆಹಲಿ: ಗುಜರಾತ್​ನ ಶಾಲೆಗಳಲ್ಲಿ 6ನೇ ತರಗತಿಯಿಂದ ದ್ವಿತೀಯ ಪಿಯುಸಿವರೆಗಿನ ವಿದ್ಯಾರ್ಥಿಗಳಿಗೆ ಭಗವದ್ಗೀತೆ ಬೋಧಿಸಲು ಆದೇಶಿಸಲಾಗಿದೆ. ಹೊಸ ಶಿಕ್ಷಣ ನೀತಿ ಅಡಿಯಲ್ಲಿ ಗುಜರಾತ್‌ನ ಶಾಲೆಗಳ ಮಕ್ಕಳಿಗೆ ಭಗವದ್ಗೀತೆಯನ್ನು ಕಲಿಸಲಾಗುತ್ತದೆ ಎಂದು ಗುಜರಾತ್ ಸರ್ಕಾರ ಪ್ರಕಟಿಸಿದೆ. ರಾಜ್ಯದ ಎಲ್ಲಾ ಶಾಲೆಗಳಲ್ಲಿ 6 ರಿಂದ 12 ನೇ ತರಗತಿಯ ಮಕ್ಕಳಿಗೆ ಭಗವದ್ಗೀತೆಯ ತತ್ವಗಳು ಮತ್ತು ಮೌಲ್ಯಗಳನ್ನು ಕಲಿಸಲಾಗುವುದು ಎಂದು ಗುಜರಾತ್ ಶಿಕ್ಷಣ ಸಚಿವ ಜಿತು ವಘಾನಿ ಹೇಳಿದ್ದಾರೆ.

2022-23ರ ಶೈಕ್ಷಣಿಕ ವರ್ಷದಿಂದ ಶಾಲಾ ಶಿಕ್ಷಣದಲ್ಲಿ ಭಾರತೀಯ ಸಂಸ್ಕೃತಿ ಮತ್ತು ಜ್ಞಾನ ವ್ಯವಸ್ಥೆಯನ್ನು ಅಳವಡಿಸಲು ಮೊದಲ ಹಂತದಲ್ಲಿ ಭಗವದ್ಗೀತೆಯಲ್ಲಿರುವ ಮೌಲ್ಯಗಳು ಮತ್ತು ತತ್ವಗಳನ್ನು ತರಗತಿಯಲ್ಲಿ ತಿಳುವಳಿಕೆ ಮತ್ತು ಆಸಕ್ತಿಗೆ ಅನುಗುಣವಾಗಿ ಪರಿಚಯಿಸಲಾಗುತ್ತದೆ ಎಂದು ಗುಜರಾತ್‌ನ ಶಿಕ್ಷಣ ಸಚಿವರು ಹೇಳಿದ್ದಾರೆ.

ಭಗವದ್ಗೀತೆಯನ್ನು ಹಿಂದೂಗಳ ಧರ್ಮಗ್ರಂಥ ಎಂದೇ ಪರಿಗಣಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಸರ್ಕಾರದ ಈ ನಿರ್ಧಾರದಿಂದ ಗುಜರಾತ್​ನಲ್ಲಿ ಮತ್ತೊಮ್ಮೆ ವಿವಾದ, ಗಲಾಟೆಗಳು ಸೃಷ್ಟಿಯಾಗುವ ಸಾಧ್ಯತೆಯಿದೆ. 6ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಶಾಲೆಗಳಲ್ಲಿ ಭಗವದ್ಗೀತೆಯನ್ನು ಬೋಧಿಸುವುದರ ಜೊತೆಗೆ ಭಗವದ್ಗೀತೆಯ ಕುರಿತು ಭಾಷಣ ಸ್ಪರ್ಧೆ, ಶ್ಲೋಕ ಸ್ಪರ್ಧೆ, ಸಾಹಿತ್ಯ ಸ್ಪರ್ಧೆಯನ್ನು ಕೂಡ ಆಯೋಜಿಸಲಾಗುವುದು ಎಂದು ಗುಜರಾತ್ ಸರ್ಕಾರ ತಿಳಿಸಿದೆ.

Students have a lot to learn from Bhagavad Gita- The New Indian Express
- Advertisement -

Related news

error: Content is protected !!