- Advertisement -
- Advertisement -



ಭಟ್ಕಳ : ಚಾಲಕನ ನಿಯಂತ್ರಣ ತಪ್ಪಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ, ಇಬ್ಬರು ಸಾವನ್ನಪ್ಪಿದ ಘಟನೆ ಭಟ್ಕಳದ ವೆಂಕಟಾಪುರದ ಬಳಿ ನಡೆದಿದೆ. ಭಟ್ಕಳದ ಆಜಾದ್ ನಗರ ನಿವಾಸಿ 15 ವರ್ಷದ ಬಿಲಾಲ್ ಹಾಗೂ 20 ವರ್ಷದ ಆಯಾನ್ ಮೃತರು, ಬಿಲಾಲ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಚಾಲನೆ ಮಾಡುತ್ತಿದ್ದ ಆಯಾನ್ ಗಾಯಗೊಂಡಿದ್ದ, ಆತನನ್ನು ಉಡುಪಿಯ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾನೆ. ಶಿರಾಲಿಯಿಂದ ಭಟ್ಕಳಕ್ಕೆ ಕಾರಿನಲ್ಲಿ ಬರುತ್ತಿದ್ದಾಗ ಈ ಅಪಘಾತ ನಡೆದಿದೆ. ಅಪಘಾತ ಸಂಬಂಧ ಭಟ್ಕಳ ಶಹರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -







