Friday, June 19, 2026
spot_imgspot_img
spot_imgspot_img

ಭಟ್ಕಳ: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಮೃತ್ಯು

- Advertisement -
- Advertisement -

ಭಟ್ಕಳ: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ ಹೊಡೆದ ಪರಿಣಾಮ ದ್ವಿತೀಯ ಪಿಯು ಕಾಲೇಜು ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಂಗಿನಗುಂಡಿ ಕ್ರಾಸ್ ಬಳಿ ನಡೆದಿದೆ.

ಮೃತಪಟ್ಟ ವಿದ್ಯಾರ್ಥಿಯನ್ನು ಭಟ್ಕಳ ಫಿರ್ದೌಸ್ ನಗರ ನಿವಾಸಿ ಅನೀಸ್ ಮೊಕ್ತಿಶಂ ಎಂಬವರ ಪುತ್ರ ಮುಹಮ್ಮದ್ ಮೊಹೆಶಾಂ (18) ಎಂದು ಗುರುತಿಸಲಾಗಿದೆ.

ತೆಂಗಿನಗುಂಡಿ ಕ್ರಾಸ್‌ ಬಳಿ ಈ ಅಪಘಾತ ಸಂಭವಿಸಿದೆ. ಮುಹಮ್ಮದ್ ಮೊಹೆಶಾಂ ಚಲಾಯಿಸುತ್ತಿದ್ದ ದ್ವಿಚಕ್ರ ವಾಹನ ಹೆದ್ದಾರಿ ಪ್ರವೇಶಿಸಿದ ವೇಳೆ ಕೇರಳದಿಂದ ಮುಂಬೈನತ್ತ ಸಾಗುತ್ತಿದ್ದ ಪ್ರೈವುಡ್ ಲಾರಿ ಢಿಕ್ಕಿ ಹೊಡೆದಿದೆ. ಇದರಿಂದ, ಲಾರಿಯ ಚಕ್ರಗಳಡಿ ಸಿಲುಕಿ ಸವಾರ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಮುಹಮ್ಮದ್ ಮೊಹೆಶಾಂ ಅಲಿ ಪಬ್ಲಿಕ್ ಕಾಲೇಜಿನ ವಿದ್ಯಾರ್ಥಿಯಾಗಿದ್ದರು. ಈ ಕುರಿತು ಭಟ್ಕಳ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

- Advertisement -

Related news

error: Content is protected !!