Thursday, April 25, 2024
spot_imgspot_img
spot_imgspot_img

ಭಟ್ಕಳ: ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನ ಮೂಲದ ಮಹಿಳೆ ಅರೆಸ್ಟ್..!

- Advertisement -G L Acharya panikkar
- Advertisement -

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಭಯೋತ್ಪಾದಕರ ಅಡಗು ತಾಣವಾಗಿ ಗುರುತಿಸಿಕೊಂಡಿದ್ದ ಭಟ್ಕಳದಲ್ಲಿ 8 ವರ್ಷಗಳಿಂದ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನ ಮೂಲದ ಮಹಿಳೆಯನ್ನು ಪೊಲೀಸರು ಇಂದು ವಶಕ್ಕೆ ಪಡೆದಿದ್ದಾರೆ.

ಖತೀಜಾ ಜಾವೇದ್ ಎಂಬ ಪಾಕಿಸ್ತಾನ ಮೂಲದ ಮಹಿಳೆಯು ಅಕ್ರಮವಾಗಿ 8 ವರ್ಷಗಳ ಕಾಲ ಉತ್ತರಕನ್ನಡ ಜಿಲ್ಲೆಯ ಭಟ್ಕಳದಲ್ಲಿ ವಾಸವಿದ್ದಳು. ಖಚಿತ ಮಾಹಿತಿ ಮೇರೆಗೆ ಪೊಲೀಸರು ಪರಿಶೀಲನೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ ಎನ್ನಲಾಗಿದೆ.

8 ವರ್ಷದ ಹಿಂದೆ ಭಟ್ಕಳ ಮೂಲದ ಜಾವೀದ್ ಮೊಹಿದ್ದೀನ್ ರುಕ್ನುದ್ದೀನ್‌ ಎಂಬುವವರನ್ನು ಖತೀಜಾ ದುಬೈನಲ್ಲಿ ವಿವಾಹವಾಗಿದ್ದಳು. ಖತೀಜಾ 2014ರಲ್ಲಿ ಪ್ರವಾಸಿ ವೀಸಾ ಪಡೆದು 3 ತಿಂಗಳು ಭಾರತದಲ್ಲಿದ್ದು ವಾಪಸ್​ ಹೋಗಿದ್ದಳು. ಮತ್ತೆ ಕಳ್ಳಮಾರ್ಗದ ಮೂಲಕ ಭಾರತ ಪ್ರವೇಶಿಸಿದ್ದ ಮಹಿಳೆ, 8 ವರ್ಷಗಳಿಂದ 3 ಮಕ್ಕಳೊಂದಿಗೆ ಭಟ್ಕಳದಲ್ಲೇ ವಾಸವಿದ್ದಳು. ಸುಳ್ಳು ದಾಖಲೆ ನೀಡಿ ವೋಟರ್ ಐಡಿ, ರೇಷನ್ ಕಾರ್ಡ್, ಜನ್ಮದಾಖಲೆ ಪಡೆದಿರುವುದು ತಿಳಿದುಬಂದಿದೆ. ಐಪಿಸಿ ಸೆಕ್ಷನ್ 468, 471 ಅಡಿ ಪ್ರಕರಣ ದಾಖಲಾಗಿದ್ದು, ಪೋಲಿಸರು ತನಿಖೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!