Wednesday, April 24, 2024
spot_imgspot_img
spot_imgspot_img

ಟೋಕಿಯೊ ಪ್ಯಾರಾಲಿಂಪಿಕ್ಸ್: ಬೆಳ್ಳಿಗೆ ಚುಂಬಿಸಿದ ಟೆನಿಸ್ ತಾರೆ ಭಾವಿನಾ..! ಇತಿಹಾಸ ಬರೆದೇ ಬಿಟ್ಟರು..!

- Advertisement -G L Acharya panikkar
- Advertisement -

ಟೋಕಿಯೊ ಪ್ಯಾರಾಲಿಂಪಿಕ್ಸ್ 2020 ಕ್ರೀಡಾಕೂಟದಲ್ಲಿ ಭಾರತಕ್ಕೆ ಚೊಚ್ಚಲ ಪದಕವನ್ನು ಭಾವಿನಾ ಪಟೇಲ್ ತಂದುಕೊಟ್ಟಿದ್ದಾರೆ. ಭಾರತದ ಪ್ಯಾರಾ ಟೇಬಲ್ ಟೆನಿಸ್ ಆಟಗಾರ್ತಿ ಭಾವಿನಾ ಪಟೇಲ್ ಅವರು ಬೆಳ್ಳಿ ಪದಕಕ್ಕೆ ಕೊರಳೊಡ್ಡಿದ್ದಾರೆ.

ಟೇಬಲ್ ಟೆನಿಸ್‌ನ ಫೈನಲ್ ಪಂದ್ಯದಲ್ಲಿ ಚೀನಾದ ಝೋ ಯಿಂಗ್ ವಿರುದ್ಧ 0-3 ಅಂತರದಿ0ದ ಸೋಲು ಕಾಣುವ ಮೂಲಕ ಭಾವಿನಾ ಚಿನ್ನ ಗೆಲ್ಲುವಲ್ಲಿ ಎಡವಿದರು. ಆದರೆ, ಪ್ಯಾರಾಲಿಂಪಿಕ್ಸ್ನ ಟೇಬಲ್ ಟೆನಿಸ್‌ನಲ್ಲಿ ಭಾರತ ಈವರೆಗೆ ಫೈನಲ್‌ಗೆ ಲಗ್ಗೆಯಿಟ್ಟಿದ್ದೇ ಇಲ್ಲ. ಇದೇ ಮೊದಲ ಬಾರಿಗೆ ಫೈನಲ್‌ಗೆ ತಲುಪಿ ಪದಕ ಗೆದ್ದಿರುವುದು ಐತಿಹಾಸಿಕ ಸಾಧನೆಯಾಗಿದೆ.

ತನ್ನ 12ನೇ ವಯಸ್ಸಿನಲ್ಲಿ ಪೋಲಿಯೊ ಪತ್ತೆಯಾದ 34 ರ ಹರೆಯದ ಭಾವಿನಾ ಪಂದ್ಯ ಮುಗಿದ ಬಳಿಕ ಮಾತನಾಡಿದ್ದಾರೆ. ಈ ವೇಳೆ “ನಾನು ನನ್ನನ್ನು ಅಂಗವಿಕಲೆ ಎಂದು ಪರಿಗಣಿಸುವುದಿಲ್ಲ, ನಾನು ಏನು ಬೇಕಾದರೂ ಮಾಡಬಲ್ಲೆ ಎಂದು ನನಗೆ ಯಾವಾಗಲೂ ವಿಶ್ವಾಸವಿದೆ. ನಾವು ಹಿಂದೆ ಇಲ್ಲ ಎಂಬುದನ್ನು ಸಾಬೀತುಪಡಿಸಿದ್ದೇನೆ. ಟೋಕಿಯೊದ ಪ್ಯಾರಾಲಿಂಪಿಕ್ಸ್ ಪ್ಯಾರಾ ಟೇಬಲ್ ಟೆನಿಸ್ ನಲ್ಲಿ ಪದಕ ಗೆದ್ದಿರುವುದು ಖುಷಿ ತಂದಿದೆ” ಎಂದಿದ್ದಾರೆ.

ಇವರ ಈ ಸಾಧನೆಗೆ ಪ್ರಧಾನಿ ಮೋದಿ, ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಸೇರಿದಂತೆ ಮೊದಲಾದವರು ಅಭಿನಂದನೆ ಸಲ್ಲಿಸಿದ್ದಾರೆ.

- Advertisement -

Related news

error: Content is protected !!