Monday, July 22, 2024
spot_imgspot_img
spot_imgspot_img

ಭೂಗತ ಪಾತಕಿ ರವಿ ಪೂಜಾರಿ ಸಹಚರ ಅರೆಸ್ಟ್

- Advertisement -G L Acharya panikkar
- Advertisement -

ಬೆಂಗಳೂರು: ಸುಮಾರು 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಭೂಗತ ಪಾತಕಿ ರವಿ ಪೂಜಾರಿ ಸಹಚರನೊಬ್ಬನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇಕ್ಲಾಕ್ ಖುರೇಶಿ ಬಂಧಿತ ಆರೋಪಿ.

2007ರಲ್ಲಿ ತಿಲಕ್ ನಗರದ ಠಾಣೆಯ ಶಬನಮ್ ಡೆವಲಪರ್ಸ್ ಶೂಟೌಟ್ ಪ್ರಕರಣದಲ್ಲಿ ಇಕ್ಲಾಕ್ ಖುರೇಶಿ ಎ-17 ಆರೋಪಿಯಾಗಿದ್ದ. ಈತ ಶೂಟೌಟ್ ವೇಳೆ ಗನ್ ಸಪ್ಲೈ ಮಾಡಿದ್ದ.

ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಸಿಸಿಬಿ ಜಂಟಿ ಆಯುಕ್ತ ಸಂದೀಪ್ ಪಾಟೀಲ್ , ಸಿಸಿಬಿ ಇನ್ಸ್ ಪೆಕ್ಟರ್ ಮಹಾನಂದ ಅವರ ತಂಡ ಆರೋಪಿಯನ್ನು ಬಂಧಿಸಿದೆ. ಉತ್ತರ ಪ್ರದೇಶ ಮೂಲಕ ಇಕ್ಲಾಕ್, ಪ್ರಕರಣಕ್ಕೆ ಸಂಬಂಧಿಸಿ 2 ವರ್ಷಗಳ ಕಾಲ ಜೈಲಿನಲ್ಲಿದ್ದ. ನಂತರ ಜಾಮೀನು ಪಡೆದು ಹೊರಬಂದಿದ್ದ. ಬಳಿಕ ಕೋರ್ಟ್ ಗೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ಇದೀಗ ಸುಮಾರು 12 ವರ್ಷಗಳ ನಂತರ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಇನ್ನು ಪ್ರಕರಣಕ್ಕೆ ಸಂಬಂಧಿಸಿ 3 ಮಂದಿ ಆರೋಪಿಗಳು ತಲೆಮರೆಸಿಕೊಂಡಿದ್ದು,ಅವರ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

- Advertisement -

Related news

error: Content is protected !!