Thursday, April 25, 2024
spot_imgspot_img
spot_imgspot_img

ಕೋವಿಡ್ ರೋಗಿಯೋರ್ವಳ ಮೇಲೆ ಅತ್ಯಾಚಾರ; ಮಹಿಳೆ ಸಾವು!

- Advertisement -G L Acharya panikkar
- Advertisement -

ಭೋಪಾಲ್: ಬಿ ಎಂ ಹೆಚ್ ಆರ್ ಸಿ ಆಸ್ಪತ್ರೆಯಲ್ಲಿ ಕೋವಿಡ್ ರೋಗಿಯ ಮೇಲೆ ಪುರುಷ ನರ್ಸ್ ಒಬ್ಬ ಅತ್ಯಾಚಾರ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಅತ್ಯಾಚಾರಕ್ಕೊಳಗಾದ 43 ವರ್ಷದ ಮಹಿಳೆಯು ಸಾವನ್ನಪ್ಪಿದ್ದಾಳೆ ಎಂದು ತಿಳಿದುಬಂದಿದೆ.

ಈ ಘಟನೆಯು ಕಳೆದ ಏಪ್ರಿಲ್ 6 ರಂದು ನಡೆದಿದೆ. ಆಸ್ಪತ್ರೆ ಆಡಳಿತ ಮಂಡಳಿ ಮತ್ತು ಪೊಲೀಸರು ಈ ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನ ಮಾಡಿದ್ದು, ಒಂದು ತಿಂಗಳು ಕಳೆದ ನಂತರ ಸಾಮಾಜಿಕ ಕಾರ್ಯಕರ್ತರು ಸೋಷಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಚರ್ಚೆ ನಡೆಸಿದಾಗ ಪ್ರಕರಣವು ಬೆಳಕಿಗೆ ಬಂದಿದೆ.

ಆರೋಪಿಯನ್ನು 40 ವರ್ಷದ ಸಂತೋಷ್ ಅಹಿರ್ವಾರ್ ಎಂದು ಗುರುತಿಸಲಾಗಿದ್ದು, ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಿಶತ್ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಧಿತ ಆರೋಪಿಯು ಈ ಹಿಂದೆ 24 ವರ್ಷದ ಸ್ಟಾಫ್ ನರ್ಸ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು, ಅಲ್ಲದೆ ಕೆಲಸದ ವೇಳೆಯಲ್ಲಿಯೇ ಮದ್ಯಪಾನ ಮಾಡಿದ್ದಕ್ಕಾಗಿ ಅಮಾನತು ಆಗಿದ್ದನು ಎಂದು ಮೂಲಗಳು ತಿಳಿಸಿವೆ.

- Advertisement -

Related news

error: Content is protected !!