Wednesday, July 22, 2026
spot_imgspot_img
spot_imgspot_img

ಬೀದರ್: ಟ್ರ್ಯಾಕ್ಟರ್‌ ಪಲ್ಟಿಯಾಗಿ ಸ್ಥಳದಲ್ಲೇ 13ರ ಬಾಲಕ ದುರ್ಮರಣ!

- Advertisement -
- Advertisement -

ಬೀದ‌ರ್: ಟ್ರ್ಯಾಕ್ಟರ್ ಪಲ್ಟಿಯಾಗಿ 13 ವರ್ಷದ ಬಾಲಕ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಮುದಾಳ ಗ್ರಾಮದಲ್ಲಿ ಸಂಭವಿಸಿದೆ.

ಬಾಜೋಳಗಾ ನಿವಾಸಿ, ಶೋಹಮ್ (13) ಅಪಘಾತದಲ್ಲಿ ಮೃತಪಟ್ಟ ಬಾಲಕ. ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಮುದಾಳ ಗ್ರಾಮದ ಹೊರವಲಯದಲ್ಲಿ ಈ ದುರ್ಘಟನೆ ನಡೆದಿದೆ. ಬಾಜೋಳಗಾ ಕ್ರಾಸ್‌ನಿಂದ ಡಿಸೇಲ್ ತುಂಬಿಸಲು ಹೊರಟಿದ್ದ ಟ್ರ್ಯಾಕ್ಟರ್ ಚಾಲಕನ ನಿಯಂತ್ರಣ ತಪ್ಪಿ ಮದಕಟ್ಟಿ ಕ್ರಾಸ್ ಬಳಿ ಪಲ್ಟಿಯಾಗಿದ್ದು, ಆ ವೇಳೆ ಟ್ರ್ಯಾಕ್ಟರ್ ಮೇಲೆ ಕುಳಿತಿದ್ದ ಶೋಹಮ್ ಟ್ರ್ಯಾಕ್ಟರ್ ಅಡಿಯಲ್ಲಿ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮಾಹಿತಿ ತಿಳಿಯುತ್ತಿದ್ದಂತೆಯೇ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಚಿಂಚೋಳಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಘಟನೆಯ ಕುರಿತು ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರೆಸಿದ್ದಾರೆ ಎಂದು ವರದಿ ಮೂಲಕ ತಿಳಿದು ಬಂದಿದೆ.

- Advertisement -

Related news

error: Content is protected !!